• Fri. May 10th, 2024

PLACE YOUR AD HERE AT LOWEST PRICE

ಕೋಲಾರ:ಕೋಲಾರದ ಪ್ರವಾಸಿ ಮಂದಿರದಲ್ಲಿ ನಡೆದ ಕನ್ನಡ ಸೇನೆಯ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಸಂಸದ ಎಸ್.ಮುನಿಸ್ವಾಮಿ ಅಭಿನಂದಿಸಿದರು.

ನಗರದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ, ಹಿಂದೆಂದಿಗಿಂತಲೂ ಈಗ ಕನ್ನಡ ಪರ ಸಂಘಟನೆಗಳ ಜವಾಬ್ದಾರಿ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.

ಕನ್ನಡಸೇನೆಯ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸಂಘಟನೆ ಬಲವಾಗಿ ಬೆಳೆಯುತ್ತಿದ್ದು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ದಿನನಿತ್ಯದ ಕಾಯಕ ಮಾಡುವ ಮೂಲಕ ಕನ್ನಡ ನೆಲ, ಜಲ, ಭಾಷೆ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ದೇಶದ ಎಲ್ಲಾ ಭಾಷೆಗಳನ್ನು ಗೌರವಿಸೋಣ, ರಾಜ್ಯಕ್ಕೆ ಅನ್ಯಾಯವಾದರೆ ಹೋರಾಟದ ಮೂಲಕ ಉತ್ತರ ಕೊಡೋಣ ಎಂದು ಹೇಳಿದರು. ಕನ್ನಡಿಗರ ರಕ್ಷಣೆ ಜೊತೆಗೆ ಸಮಾಜಿಕ ಕಾರ್ಯಗಳಲ್ಲೂ ಕನ್ನಡ ಸೇನೆ ಮುಂಚೂಣಿಯಲ್ಲಿ ಇದೆ ಎಂದು ವೆಂಕಟಪ್ಪ ಅಭಿಪ್ರಾಯಪಟ್ಟರು.

ಕನ್ನಡ ಸೇನೆಯ ನೂತನ ಜಿಲ್ಲಾ ಗೌರವಾಧ್ಯಕ್ಷ ಪಿ.ನಾರಾಯಣಪ್ಪ ಮಾತನಾಡಿ, ಕನ್ನಡ ಭಾಷೆಗೆ ಅನ್ಯಾಯದ ಸಂಧರ್ಭದಲ್ಲಿ ಹೋರಾಟದ ಮೂಲಕ ನಮ್ಮ ಹಕ್ಕನ್ನು ಪಡೆದುಕೊಂಡಿದ್ದೇವೆ, ರಾಜ್ಯದ ರಕ್ಷಣೆ ಪ್ರತಿಯೊಬ್ಬ ಯುವಕರ ಜವಾಬ್ದಾರಿ, ಸಂಘಟನೆ ಕನ್ನಡಿಗರನ್ನು ಎಚ್ಚರಿಸುವ ಮೂಲಕ ಎಲ್ಲಾ ವಲಯಗಳಲ್ಲಿ ಕನ್ನಡಿಗರಿಗೆ ಸಿಗಬೇಕಾದ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಮಾಡಬೇಕೆಂದು ಕರೆ ನೀಡಿದರು.

ಕನ್ನಡ ಸೇನೆ ಜಿಲ್ಲಾ ಗೌರವ ಸಲಹೆಗಾರರಾಗಿ ಸಿ.ವೆಂಕಟಕೃಷ್ಣಯ್ಯ, ನಗರಘಟಕದ ಅಧ್ಯಕ್ಷರಾಗಿ ನಾಗೇಶ್, ನಗರಘಟಕದ ಗೌರವ ಅಧ್ಯಕ್ಷರಾಗಿ ಶೇಷಗಿರಿ ನಾಯಕ್, ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ರಾಮಚಾರಿ, ನಗರಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಧರ್.

ನಗರಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಅರುಣ್, ನಗರ ಸಂಚಾಲಕರಾಗಿ ರಂಜಿತ್, ನಿರಂಜನ್ ಆಯ್ಕೆಯಾದರು. ಕನ್ನಡ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸ್ವಾಗತಿಸಿದರು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!