• Tue. May 7th, 2024

ನಗರವನದನು ಪ್ಲಾಸ್ಟಿಕ್ ಮುಕ್ತವನ್ನಾಗಿಸೋಣ: ಜೈನ್ ಕಾಲೇಜಿನ ಪ್ರಾಂಶುಪಾಲೆ.

PLACE YOUR AD HERE AT LOWEST PRICE

ಕೆಜಿಎಫ್:ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ಸಂಕಲ್ಪ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣಬದ್ದರಾಗಬೇಕೆಂದು ಜೈನ್ ಕಾಲೇಜಿನ ಪ್ರಾಂಶುಪಾಲೆ ರೇಖಾ ಸೇಥಿ ಹೇಳಿದರು.

ಅವರು ನಗರದ ಜೈನ್ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

೧೯೭೪ ರಿಂದ ದೇಶದಾದ್ಯಂತ ಪರಿಸರ ದಿನ ಆಚರಣೆ ಮಾಡುತ್ತಿದ್ದು, ಈ ಬಾರಿಯ ಘೋಷ ವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ತಡೆಯುವುದಾಗಿದೆ ಎಂದರು.

ಎಲ್ಲರಿಗೂ ವೈಯುಕ್ತಿಕ, ಸಾಮಾಜಿಕ, ಕೌಟಂಬಿಕ, ಸಂಘಟಿತ ಜೀವನದಲ್ಲಿ ಪರಿಸರದ ಮಹತ್ವದ ಅರಿವಿದೆ. ಆದರೆ ಈ ಅರಿವನ್ನು ವೈಯಕ್ತಿಕ ಜೀವನದಲ್ಲಿಯೂ ಪ್ರತಿಯೊಬ್ಬರು ಅಳವಡಿಸಿಕೊಂಡು ಅನುಷ್ಟಾನಕ್ಕೆ ತರಬೇಕೆಂದರು.

ಮುಂದಿನ ಪೀಳಿಗೆ ಭವಿಷ್ಯ ಅಂಧಕಾರಕ್ಕೆ ಹೋಗುವ ಮುನ್ನವೇ ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆಗೆ ಸಮಾಜದಲ್ಲಿನ ಎಲ್ಲರೂ ಮುಂದಾಗಬೇಕೆಂದ ಅವರು, ಪರಿಸರ ರಕ್ಷಣೆ ವಿಚಾರದಲ್ಲಿ ಯಾರು ಉದಾಸೀನ ಮಾಡಬಾರದು ಎಂದರು.

ಕಾಲೇಜಿನ ನರಸಿಂಹಮೂರ್ತಿ ಮಾತನಾಡಿ, ಪ್ರಕೃತಿ ಸಂರಕ್ಷಣೆ ಎಲ್ಲರ ಜವಾಬ್ದಾರಿ, ನಿಸರ್ಗ ಉಳಿದರೆ ಮಾತ್ರ ಎಲ್ಲ ಜೀವಿಗಳ ಉಳಿವು, ಸಾಧ್ಯವಾಗಿದ್ದು, ಈ ಸತ್ಯ ಅರಿತರೆ ಮಾತ್ರ ಪರಿಸರ ಉಳಿಸುವ ಜವಾಬ್ದಾರಿ ಹೃದಯದಿಂದ ಆರಂಭವಾಗುತ್ತದೆ ಎಂದರು.

ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಪ್ರತಿಯೊಂದು ಜೀವ ಸಂಕುಲ, ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಬಿಸಿದೆ ಎಂದರೆ ತಪ್ಪಾಗಲಾರದು.

ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ.

ಮನುಷ್ಯ ತನ್ನ ಅಭಿವೃದ್ದಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದು ವಿಷಾದ ವ್ಯಕ್ತಪಡಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪರಿಸರದ ಅರಿವು ಮೂಡಿಸುವ ಘೋಷ ವಾಕ್ಯಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಪರಿಸರದ ಬಗ್ಗೆ ಅರಿವು ಮೂಡಿಸಿದರು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!