• Tue. May 7th, 2024

ಸರ್ಕಾರಿ ಸೇವೆಗೆ ಸೇರಿದ ಬಳಿಕ ನಿವೃತ್ತಿ ಸಹಜ:ಎಸ್.ಪಿ ಧರಣಿದೇವಿ.

PLACE YOUR AD HERE AT LOWEST PRICE

ಕೆಜಿಎಫ್:ಸರ್ಕಾರಿ ಸೇವೆಗೆ ಸೇರಿದ ಬಳಿಕ ನಿವೃತ್ತಿ ಪ್ರತಿಯೊಬ್ಬ ನೌಕರರಿಗೆ ಒಂದು ದಿನ ಬಂದೇ ಬರುತ್ತದೆ. ಆದರೆ ಸೇವೆಯಲ್ಲಿರುವ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುವ ಮೂಲಕ ಎಲ್ಲರ ವಿಶ್ವಾಸಗಳಿಸುವುದು ಪ್ರಮುಖವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಧರಣಿದೇವಿ ಹೇಳಿದರು.

ಅವರು ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಜಿಲ್ಲಾ ಅಪರಾಧ ವಿಭಾಗದ ಎಎಸ್‌ಐ ಸಯ್ಯದ್ ಮುಸ್ತಾಕ್ ಅಹ್ಮದ್ ಅವರು ಜೂನ್ ೩೦ ರಂದು ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇತರ ಸರ್ಕಾರಿ ಸೇವೆಗಳಿಗಿಂತ ಪೊಲೀಸ್ ಇಲಾಖೆ ಸೇವೆಯು ವಿಶಿಷ್ಟವಾಗಿದ್ದು, ದಿನದ ೨೪ ಗಂಟೆಯೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕಾಗಿದ್ದು, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದುವ ಮೂಲಕ ಜನರ ನೆನಪಿನಲ್ಲಿ ಉಳಿಯುವಂತಹ ಕೆಲಸವನ್ನು ಮಾಡಬೇಕಾಗಿದೆ ಎಂದರು.

ನಿವೃತ್ತರಾದ ಎಎಸ್‌ಐ ಸಯ್ಯದ್ ಮುಸ್ತಾಕ್ ಅಹ್ಮದ್ ಅವರು ಸುಮಾರು ೩೦ ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾದ ತಮ್ಮ ಸೇವಾವಧಿಯಲ್ಲಿ ವಿವಿಧ ಪೊಲೀಸ್ ಠಾಣೆ, ಕಛೇರಿಗಳಲ್ಲಿ ಹಾಗೂ ಸಿಬಿಐ ಘಟಕಗಳಲ್ಲಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದು ಅವರ ನಿವೃತ್ತಿ ಜೀವನ ಸಂತಸದಿAದ ಕೂಡಿರಲಿ ಎಂದು ಶುಭ ಹಾರೈಸಿದರು.

ನಿವೃತ್ತರಾದ ಎಎಸ್‌ಐ ಸಯ್ಯದ್ ಮುಸ್ತಾಕ್ ಅಹ್ಮದ್ ದಂಪತಿಯನ್ನು ಶಾಲು ಹೊದಿಸಿ, ಸನ್ಮಾನಿಸಿ, ಸೇವಾ ಪ್ರಮಾಣಪತ್ರ, ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು. ನಿವೃತ್ತರ ಪತ್ನಿ ನಾಹೀದಾಬಾನು ಮತ್ತು ಕುಟುಂಬ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಮುಖ್ಯ ಅತಿಥಿಗಳಾಗಿ ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ ಲಿಂಗಾರೆಡ್ಡಿ, ಕಛೇರಿ ಅಧೀಕ್ಷಕಿ ನಜೀಮಾಬಾನು, ಆಪ್ತ ಸಹಾಯಕಿ ಜಿ.ಮಮತಾ ಮತ್ತಿತರರು ಉಪಸ್ಥಿತರಿದ್ದರು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!