• Fri. May 3rd, 2024

PLACE YOUR AD HERE AT LOWEST PRICE

ಬಂಗಾರಪೇಟೆ:ರಾಜ್ಯಾದ್ಯಂತ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗಗಳ ಬ್ಯಾಕ್ ಲಾಗ್ ಹುದ್ದೆಗಳನ್ನು ಸರ್ಕಾರ ಕೂಡಲೇ ಭರ್ತಿ ಮಾಡಬೇಕೆಂದು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಆಗ್ರಹಿಸಿದರು.

ಅವರು ಪಟ್ಟಣದ ತಾಲೂಕು ಕಚೇರಿ ಮುಂದೆ ಉಪತಹಶೀಲ್ದಾರ್ ಚಂದ್ರಶೇಖರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕೆಂದು ಕಾನೂನಿನಲ್ಲಿ ಆದೇಶವಿದೆ, ಹಾಗಾಗಿ ರಾಜ್ಯಾದ್ಯಂತ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದ್ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಮುಂದುವರಿಯುತ್ತಾರೆಯೇ ಎಂದು ಪ್ರಶ್ನಿಸಿದರು.

ದೇಶದ ಕಟ್ಟ ಕಡೆ ವ್ಯಕ್ತಿಗೂ ಶಿಕ್ಷಣ ಮತ್ತು ಉದ್ಯೋಗ ಸಿಗಬೇಕೆಂಬುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸಾಗಿತ್ತು, ಆದಕಾರಣ ಇದೀಗ ನೂತನವಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ರಾಜ್ಯದಲ್ಲಿನ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಈ ಮೂಲಕ ಸರ್ಕಾರಕ್ಕೆ ಮನವಿ ನೀಡಿ ಎಚ್ಚರಿಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಅಯ್ಯಪ್ಪ, ರವಿಚಂದ್ರ ವೆಂಕಟೇಶ್, ಕರ್ಣ,ಶಿವಕುಮಾರ್, ಗೌತಮ್,ಮನೋಜ್,ಮಂಜು,ಧನರಾಜ್,ಸುಭಾಷ್ ಮೊದಲಾದವರು ಇದ್ದರು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!