• Sat. Apr 27th, 2024

PLACE YOUR AD HERE AT LOWEST PRICE

 ಬಂಗಾರಪೇಟ:ತಾಲೂಕಿನ ಬೋಡುಗುರ್ಕಿ ಗ್ರಾಮದಲ್ಲಿ ಇಬ್ಬರು ಯುವ ಪ್ರೇಮಿಗಳು ಪ್ರೀತಿಸಿ ಮದುವೆ ಮಾಡಿಕೊಳ್ಳಲು ನಿರ್ಧರಿಸಿರುವ ವೇಳೆ ಜಾತಿಯ ಕಾರಣಕ್ಕಾಗಿ ಯುವತಿ ಕುಟುಂಬದವರು ಮರ್ಯಾದೆ ಹತ್ಯೆ ಮಾಡಿರುತ್ತಾರೆ, ಇದನ್ನು ತಿಳಿದ ಯುವಕನು ಸಹ ರೈಲಿಗೆ ಸಿಲುಕಿ ಸಾವನ್ನಪ್ಪಿರುವುದು ಖಂಡನೀಯ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೂಲಿಕುಂಟೆ ರಮೇಶ್ ಹೇಳಿದರು.

ತಾಲೂಕಿನ ಬೋಡುಗುರ್ಕಿ ಗ್ರಾಮದಲ್ಲಿ ವಾಸವಾಗಿರುವ ದಲಿತ ಕುಟುಂಬದ ಮೃತಪಟ್ಟಿರುವ ಗಂಗರಾಜು ಅವರ ನಿವಾಸಕ್ಕೆ ತಾಲೂಕು ಸಂಚಾಲಕ ದೇಶಿಹಳ್ಳಿ ಶ್ರೀನಿವಾಸ್ ನೇತೃತ್ವದಲ್ಲಿ ರಾಜ್ಯ ಸಂಚಾಲಕರು ಭೇಟಿಕೊಟ್ಟು ಕುಟುಂಬಕ್ಕೆ ಧೈರ್ಯ ತುಂಬಿ ಮಾತನಾಡುತ್ತಾ, ಜಾತಿ ಕಾರಣದಿಂದ ಇಬ್ಬರು ಸಾವನಪ್ಪಿದ್ದಾರೆ.

ಇದು ಕೇಂದ್ರ ಮತ್ತು ರಾಜ್ಯ ಸರ್ಕಾರ ತಲೆತಗ್ಗಿಸುವ ವಿಷಯವಾಗಿದೆ.ಈ ಒಂದು ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಒತ್ತಾಯ ಮಾಡುತ್ತಾ, ಈ ದೇಶದಲ್ಲಿ, ರಾಜ್ಯದಲ್ಲಿ ಇನ್ನೂ ಸಹ ಅಸ್ಪೃಶ್ಯತೆ, ಮೌಡ್ಯತೆ, ಹಾಗೂ ಮರ್ಯಾದೆ ಹತ್ಯೆ ಪ್ರಕರಣಗಳು, ದೌರ್ಜನ್ಯ ಪ್ರಕರಣಗಳು ಇನ್ನೂ ಜೀವಂತವಾಗಿವೆ,ಇಲ್ಲಿ ನಡೆದಿರುವ ಘಟನೆಗೆ ಉದಾಹರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸಂವಿಧಾನದ ಅಡಿಯಲ್ಲಿರುವಂತಹ ಕಾನೂನುಗಳನ್ನು ಬಲಿಷ್ಠಗೊಳಿಸಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವತವರಿಗೆ ಕಠಿಣವಾದ ಶಿಕ್ಷೆಯನ್ನು ಕೊಟ್ಟು ಶಿಕ್ಷೆಗೆ ಒಳಪಡಿಸಿದರೆ ಮಾತ್ರ ಇಂತಹವನ್ನು ತಡೆಗಟ್ಟಲು ಸಾಧ್ಯ.

ರಾಜ್ಯ ಸರ್ಕಾರದ ಗೃಹಮಂತ್ರಿಗಳಾದ ಪರಮೇಶ್ವರ್ ಸಮಾಜ ಕಲ್ಯಾಣ ಇಲಾಖೆಯ ಸಚಿವ ಮಹದೇವಪ್ಪನವರು ಇದ್ದಾರೆ ಇವರಿಬ್ಬರೂ ಸಹ ಇಂತಹ ಪ್ರಕರಣಗಳ ಬಗ್ಗೆ ಚರ್ಚೆ ಮಾಡಿ ಬಲಿಷ್ಠವಾದ ಕಾನೂನನ್ನು ಜಾರಿ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.

ತಾಲೂಕಿನ ಜನಪ್ರತಿನಿಧಿಗಳು ಬೋಡುಗುರ್ಕಿ ಗ್ರಾಮಕ್ಕೆ ಭೇಟಿಕೊಟ್ಟು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಇದರ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ ಇಂತಹ ಕೃತ್ಯಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳುವಂತೆ ಒತ್ತಾಯ ಮಾಡಬೇಕೆಂದರು.

ಅದೇ ರೀತಿ ದಲಿತ ಕುಟುಂಬದ ಯುವಕ ಮೃತಪಟ್ಟಿರುವ ಹಿನ್ನೆಲೆ ಸರ್ಕಾರ ಈ ಕುಟುಂಬಕ್ಕೆ 25 ಲಕ್ಷ ಪರಿಹಾರ ಹಾಗೂ ಮೃತ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸವನ್ನು ನೀಡಬೇಕೆಂದು ಒತ್ತಾಯ ಮಾಡಿದರು.ಇಲ್ಲವಾದ ಪಕ್ಷದಲ್ಲಿ ರಾಜ್ಯದ್ಯಂತ ದಲಿತ ಸಂಘರ್ಷ ಸಮಿತಿ ಹೋರಾಟ ಮಾಡುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಫೋನಿನ ಮುಖಾಂತರ ಕರೆ ಮಾಡಿ ಕುಟುಂಬಕ್ಕೆ ಪರಿಹಾರವನ್ನು ನೀಡಬೇಕೆಂದು ತಿಳಿಸಿದಾಗ ಅವರ ಕುಟುಂಬಕ್ಕೆ 4 ಲಕ್ಷದ 12,500ಗಳನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ದೇಶಿಹಳ್ಳಿ ಶ್ರೀನಿವಾಸ್, ಮಾಜಿ ಪುರಸಭೆ ನಾಮ ನಿರ್ದೇಶಕ ಸದಸ್ಯ ಮೆಹಬೂಬ್, ಮೊದಲಾದವರು ಇದ್ದರು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!