• Sat. Apr 27th, 2024

PLACE YOUR AD HERE AT LOWEST PRICE

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿ, ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ.

ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ.

ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ.

ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ.

ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!