• Sun. Apr 28th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಪ್ಲಾಸ್ಟಿಕ್ ಮುಕ್ತ ಅಭಿಯಾನ ಜುಲೈ 1ರಿಂದ ಪ್ರಾರಂಭವಾಗಿ ಜುಲೈ 28ರ ತನಕ ನಡೆಯಲಿದ್ದು ವ್ಯಾಪಾರಿಗಳು ಸಾರ್ವಜನಿಕರು ಈ ಅಭಿಯಾನಕ್ಕೆ ಸಹಕರಿಸಬೇಕು. ಯಾರೂ  ಪ್ಲಾಸ್ಟಿಕ್ ಬಳಸಬಾರದು ಎಂದು ಪುರಸಭೆಯ ನೂತನ ಮುಖ್ಯಾಧಿಕಾರಿ ಮೀನಾಕ್ಷಿ ತಿಳಿಸಿದರು.

ಅವರು ಪಟ್ಟಣದ ಪುರಸಭೆ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ, ಸಾರ್ವಜನಿಕರು ಯಾರೂ ಪ್ಲಾಸ್ಟಿಕ್ ಬಳಸಬಾರದು. ವ್ಯಾಪಾರಿಗಳು ಗ್ರಾಹಕರಿಗೆ ಚೀಲ ತರುವಂತೆ ಹೇಳಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಸಹಕರಿಸಬೇಕು,

ಪ್ಲಾಸ್ಟಿಕ್ ಬಳಸದೆ ಸ್ವಚ್ಛವಾದ ಪರಿಸರ ಉಂಟು ಮಾಡುವಲ್ಲಿ ಸಹಕರಿಸಬೇಕು. ಯಾವುದೇ ವ್ಯಾಪಾರಿಗಳು ಅನಧಿಕೃತವಾಗಿ ಪ್ಲಾಸ್ಟಿಕ್ ಮಾರಾಟ ಮಾಡಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

ಈ ಅಭಿಯಾನವನ್ನು ಸ್ವಚ್ಛತೆ ಮತ್ತು ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಮಾಡುತ್ತಿದ್ದೇವೆ, ಯಾವುದೇ ಕಾರಣಕ್ಕೂ ಸಹ ಪ್ಲಾಸ್ಟಿಕ್ ಅನ್ನು ಬಳಸಬಾರದು, ಅಂಗಡಿ ಮಾಲೀಕರು ತಮ್ಮ ಅಂಗಡಿಗಳಿಗೆ ಬರುವಂತಹ ಗ್ರಾಹಕರಿಗೆ ತಿಳಿಹೇಳಿ ಕೈಚೀಲವನ್ನು ತರಲು ಸೂಚಿಸಿ ಸಹಕರಿಸಬೇಕು ಎಂದು ಹೇಳಿದರು.

 (ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!