• Sun. Apr 28th, 2024

PLACE YOUR AD HERE AT LOWEST PRICE

ಕೆಜಿಎಫ್:ತಾಲ್ಲೂಕಿನ ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ರಷಿ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಸುಂದರಪಾಳ್ಯ ಗ್ರಾಪಂಯ ಗೆನ್ನೇರಹಳ್ಳಿ ಗ್ರಾಮದ ನಿವಾಸಿಗಳಾದ ಸುಜಾತಮ್ಮ ಅಂಜಪ್ಪ ದಂಪತಿಗಳ ಪುತ್ರಿಯಾದ ರಷಿ ಎಂಬ ವಿದ್ಯಾರ್ಥಿಯೂ ಶಿಕ್ಷಣ ಕ್ಷೇತ್ರದಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾಳೆ.

ಗೆನ್ನೇರಹಳ್ಳಿ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಗುಟ್ಟಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು, ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಪದವಿ ಮುಗಿಸಿ, ಕೋಲಾರದ ಮಹಿಳಾ ಕಾಲೇಜಿನಲ್ಲಿ ಪ್ರಥಮ

ದರ್ಜೆಯ ಶಿಕ್ಷಣವನ್ನು ಮುಗಿಸಿರುವ ವಿದ್ಯಾರ್ಥಿ ರಷಿಗೆ ಬೆಂಗಳೂರು ವಿಶ್ವವಿದ್ಯಾನಿಲದಲ್ಲಿ  ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ.

ಸುಂದರಪಾಳ್ಯ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡು ಮೊದಲ ವರ್ಷದಲ್ಲಿ ಅನುರ್ತಿಣ ಹೊಂದಿ ಶಿಕ್ಷಣವೇ ಬೇಡ ಎಂಬ ನಿರ್ಧಾರದಿಂದ ಶಿಕ್ಷಣದಿಂದ ದೂರ ಉಳಿದು ಮನೆಯಲ್ಲಿ ಉಳಿದಿದ್ದ ರಷಿಯ ಬಗ್ಗೆ ತಮ್ಮ ಪೋಷಕರು ಸುಂದರಪಾಳ್ಯ ಕಾಲೇಜಿನ ಉಪನ್ಯಾಸಕರಿಗೆ ಮಾಹಿತಿ ನೀಡಿದ ಪರಿಣಾಮ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಯನ್ನು ಕಾಲೇಜಿಗೆ ಕರೆತರುವಲ್ಲಿ ಯಶಸ್ವಿಯಾದರು.

ಪುನಃ ಕಾಲೇಜಿನ ಕಡೆಗೆ ಮುಖ ಮಾಡಿದ ವಿದ್ಯಾರ್ಥಿ ರಷಿ ಉಪನ್ಯಾಸಕರ ಸಲಹೆಯಂತೆ ಕಲಾ ವಿಭಾಗವನ್ನು ಆಯ್ಕೆ ಮಾಡಿಕೊಂಡು ಪ್ರಥಮ ಹಾಗೂ ದ್ವೀತಿಯ ಪಿಯುಸಿಯನ್ನು ಆತ್ಯುತ್ತಮವಾಗಿ ಉರ್ತೀಣ ಮಾಡಿ ಉನ್ನತ ಶಿಕ್ಷಣದ ಕಡೆಗೆ ಹೆಜ್ಜೆ ಇಟ್ಟಿದರು.

ಸುಂದರಪಾಳ್ಯ ಕಾಲೇಜಿನಲ್ಲಿ ಪದವಿ ಮುಗಿಸಿ ಕೋಲಾರ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ದಾಖಲಾತಿಯಾಗಿ ಉತ್ತಮ ಶಿಕ್ಷಣ ಪಡೆಯುವ ಮೂಲಕ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಚಿನ್ನದ ಪದಕವನ್ನು ನೀಡಿ ಗೌರವಿಸಿರುವುದು ಪೋಷಕರಲ್ಲಿ ಹಾಗೂ ಶಿಕ್ಷಕರಿಗೆ ಸಂತಸ ತಂದಿದೆ.

ಕೆಜಿಎಫ್ ತಾಲ್ಲೂಕಿನ ಗ್ರಾಮೀಣ ಭಾಗದ ಹಳ್ಳಿ ಹುಡುಗಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಚಿನ್ನದ ಪದಕ ದೊರೆತ್ತಿರುವುದು ತಾಲ್ಲೂಕಿಗೆ ಕೀರ್ತಿ ಬಂದಿದೆ, ಶಿಕ್ಷಣ ಕ್ಷೇತ್ರದಲ್ಲಿ ಬಡವರು ಶ್ರೀಮಂತರು ಎಂಬ ಭಾವನೆ ಇಲ್ಲದೆ ಯಾರು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ವಿದ್ಯಾರ್ಥಿ ರಷಿ ಮಾದರಿಯಾಗಿದ್ದಾಳೆ.

ಬಡ ಕುಟುಂಬದಲ್ಲಿ ಜನಸಿದ್ದ ನಾನು ಉತ್ತಮ ಶಿಕ್ಷಣ ಪಡೆದು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಕನಸು ಕಂಡಿದ್ದೆ, ಅದರೆ ಪದವಿ ಶಿಕ್ಷಣದಲ್ಲಿ ಯಡವಟ್ಟು ಮಾಡಿಕೊಂಡು ಮುಂದಿನ ದಾರಿಯೇ ಇಲ್ಲದಂತೆ ಮಾಡಿಕೊಂಡಿದ್ದೇ, ಅದರೆ ನಮ್ಮ ಪೋಷಕರು ಹಾಗೂ ಶಿಕ್ಷಕರ ಪ್ರೋತಾಹ ಪ್ರೇರಣೆಯಿಂದ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಪದಕ ವಿಜೇತೆ ರಷಿ. ಸಂತಸ ಹಂಚಿಕೊಂಡಿದ್ದಾರೆ.

ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ತಪ್ಪು ಮಾಡುವುದು ಸಹಜ ಅದರೆ ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸರಿ ದಾರಿಯಲ್ಲಿ ಮುನ್ನಡೇಸುವ ಮೂಲಕ ವಿದ್ಯಾರ್ಥಿಗಳ ಗುರು ಮುಟ್ಟಿಸಬೇಕು, ಶಿಕ್ಷಕರಿಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಮಕ್ಕಳಂತೆ ಕಾಣುತ್ತಾರೆ, ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಬರುವುದು ಶಿಕ್ಷಕರಿಗೆ ನೀಡುವ ಕೊಡುಗೆಯಾಗುತ್ತದೆ ಎಂದು ಸುಂದರಪಾಳ್ಯ ಕಾಲೇಜು ಉಪನ್ಯಾಸಕ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

 (ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!