• Sun. May 5th, 2024

PLACE YOUR AD HERE AT LOWEST PRICE

ಕೆಜಿಎಫ್:ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಕಾರೊಂದು ೭೦ ವರ್ಷದ ವೃದ್ದೆಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ದೆ ತೀವ್ರವಾಗಿ ಗಾಯಗೊಂಡು ಕೆಜಿಎಫ್ ನಗರದ ಸಾರ್ವಜನಿಕ ಆಸ್ಪತ್ರೆ ಸೇರಿದ್ದಾರೆ.

ತಾಲ್ಲೂಕಿನ ನಾಗಶೆಟ್ಟಿಹಳ್ಳಿ ನಿವಾಸಿ ವೆಂಕಟಮ್ಮ(೭೦) ಗಾಯಗೊಂಡ ವೃದ್ಧೆಯಾಗಿದ್ದು, ಶುಕ್ರವಾರ ಮದ್ನಾಹ ಸುಮಾರು ೧೨ ಗಂಟೆ ಸಮಯದಲ್ಲಿ ಬೇತಮಂಗಲ-ಬಂಗಾರಪೇಟೆ ಮುಖ್ಯರಸ್ತೆಯ ನಾಗಶೆಟ್ಟಿಹಳ್ಳಿ ಬಳಿ ಅಪಘಾತ ಸಂಭವಿಸಿದೆ.

ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನ ಶಾಂತಿ ನಗರದ ರಾಜ್ಯ ರಸ್ತೆ ಸಾರಿಗೆ ಇಲಾಖೆ ಕಾರ್ಯದರ್ಶಿಗಳದ್ದು ಎಂದು ಹೇಳಲಾದ ಕೆಎ-೫೭ಎಫ್೫೨೬೧ ಸಂಖ್ಯೆಯ ಕಾರು ಬೇತಮಂಗಲದ ಕಡೆಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ವೃದ್ದೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಗಾಯಗೊಂಡ ವೃದ್ದೆಯನ್ನು ಅದೇ ಕಾರಿನಲ್ಲಿ ತಂದು ಸಾರ್ವಜನಿಕ ಆಸ್ಪತ್ರೆಯ ಬಳಿ ಬಿಟ್ಟು ಕಾರಿನಲ್ಲಿದ್ದವರು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಸಾರ್ವಜನಿಕರು ಗಾಯಗೊಂಡಿದ್ದ ವೃದ್ದೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದುಬಂದಿದೆ.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!