• Sun. May 5th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಬಿಜೆಪಿ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ನಾನು ನಿರಂತರ 10 ವರ್ಷಗಳು ಶ್ರಮಪಟ್ಟು ಯರಗೊಳ್ ಜಲಾಶಯವನ್ನು ನಿರ್ಮಿಸಿದ್ದೇನೆ. ಆದರೆ ಕೆಲವು ಅಧಿಕಾರಿಗಳು ಗುತ್ತಿಗೆದಾರರು ಬಿಜೆಪಿ ನಾಯಕರ ಜೊತೆಗೆ ಕೈಜೋಡಿಸಿ ಯರಗೋಳ್ ಯೋಜನೆಯಲ್ಲಿ ಹಣ ಲಪಟಾಯಿಸಿದ್ದು, ಇಂಥವರ ವಿರುದ್ಧ ಮುಖ್ಯಮಂತ್ರಿಗಳು ತನಿಖೆಗೆ ಆದೇಶವನ್ನು ನೀಡಿದ್ದಾರೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಡಿಕೆ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿ, ಬಿ.ಇ.ಎಂ.ಎಲ್. ವ್ಯಾಪ್ತಿಯಲ್ಲಿ ನಿರುಪಯುಕ್ತವಾದ 1000 ಎಕ್ಕರೆ ಜಮೀನನ್ನು ಗುರುತಿಸಿದ್ದು, ಅತಿ ಶೀಘ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಲು ಸರ್ಕಾರ ಅನುಮೋದನೆಯನ್ನು ನೀಡಿದೆ.

ಸ್ಥಳೀಯ ಕೆ.ಜಿ.ಎಫ್. ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಕಲ ಶಶಿಧರ್ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದ ಗೌಡರ ಸಹಕಾರದೊಂದಿಗೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ಸಮಯದಲ್ಲಿ 360ಕ್ಕೂ ಹೆಚ್ಚು ಭರವಸೆಗಳನ್ನು ನೀಡಿತ್ತು. ಆದರೆ ಈಡೇರಿಸಿದ್ದು ಕೇವಲ 30 ಮಾತ್ರ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗಾಗಿ ನೀಡಿದ್ದ 3 ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ.

ಮನಮೋಹನ್ ಸಿಂಗ್ ರವರು ಪ್ರಧಾನಿಯಾಗಿದ್ದ ಸಮಯದಲ್ಲಿ 73 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ಆದರೆ ಮೋದಿ ಅವರು ಒಂದು ರೂಪಾಯಿಯನ್ನು  ಸಾಲ ಮನ್ನಾ ಮಾಡಲಿಲ್ಲ. ಇದರೊಂದಿಗೆ ರೈತರಿಗೆ ಮಾರಕವಾದ ಎ.ಪಿ.ಎಂ.ಸಿ. ಕಾಯ್ದೆಯನ್ನು ಜಾರಿಗೆ ತಂದು ಹಲವು ಜನರ ಸಾವಿಗೆ ಕಾರಣಕರ್ತರಾದರು. ಇಂತಹ ಬಿಜೆಪಿ ನಾಯಕರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಕಾಮಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಡಗುರ್ಕಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ, ರಕ್ಷಣೆ ಹಾಗೂ ವಿಶೇಷ ಸೌಲಭ್ಯ ಒದಗಿಸುವಂತೆ ಮಾನ್ಯ ಗೃಹ ಸಚಿವರಿಗೆ ಮನವಿ ಮಾಡಲಾಗಿದೆ. ಆದಷ್ಟು ಬೇಗ ಸೌಲಭ್ಯಗಳನ್ನು ಒದಗಿಸಲಾಗುವುದು. ಸದನದ ಕಲಾಪಗಳು ಮುಗಿದ ನಂತರ ಸಚಿವರ ಜೊತೆಯಲ್ಲಿ ಹೋಗಿ ಸಾಂತ್ವಾನ ತಿಳಿಸಲಾಗುವುದು ಎಂದರು.

 ರಾಷ್ಟ್ರೀಯ ಪಕ್ಷ ಎಂದು ಬೊಬ್ಬೆ ಹಾಕುವ ಬಿಜೆಪಿ ಕಾರ್ಯಕರ್ತರು, ಮುಖಂಡರು, ನಾಯಕರು, ಮೋದಿ ಭಕ್ತರು ತತ್ವ ಸಿದ್ಧಾಂತಗಳನ್ನು ಮರೆತು ವಿಧಾನಸಭಾ ಚುನಾವಣೆಯ ಸಮಯದಲ್ಲಿ ರಾತ್ರೋರಾತ್ರಿ ಕೇಸರಿ ಶಾಲುಗಳನ್ನು ತ್ಯಜಿಸಿ ಹಸಿರು ಶಾಲುಗಳನ್ನಾಗಿ ಮಾರ್ಪಡಿಸಿ ಜೆಡಿಎಸ್ ಪರ ಪ್ರಚಾರ ಮಾಡಿದ್ದರು.

ಆದರೆ ನನ್ನ ಅಭಿವೃದ್ಧಿ ಕಾರ್ಯಗಳು ಹಾಗೂ ಡಿ.ಕೆ. ಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಕರ್ತರ ಪರಿಶ್ರಮದಿಂದ ನಾನು ಶಾಸಕನಾಗಿದ್ದೇನೆ. ಕಷ್ಟಕಾಲದಲ್ಲಿ ಕೈಹಿಡಿದ ನಿಮಗೆ ನಾನು ಚಿರಋಣಿಯಾಗಿದ್ದೇನೆ ಎಂದು ಮತದಾರರಿಗೆ ತಿಳಿಸಿದರು.

 ಜಿ ಆರ್ ಮಾರ್ಕೆಟಿನ ಮಾಲೀಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಗೋಪಾಲರೆಡ್ಡಿ ಅವರು ಹಲವು ವರ್ಷಗಳಿಂದ ನಿರಂತರ ಸಮಾಜ ಸೇವೆಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಜೊತೆಗೆ ಡಿ.ಕೆ.ಹಳ್ಳಿ ಜಿಲ್ಲಾ ಪಂಚಾಯಿತಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ಸಿನ ವರಿಷ್ಠ ನಾಯಕರು ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಾಗಿದ್ದು ಎಲ್ಲಾ ಕಾರ್ಯಕರ್ತರು ಸಂಘಟನಾತ್ಮಕವಾಗಿ ಚುನಾವಣೆಗೆ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದರು.

 ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್ ಎಂದು ಚುನಾವಣೆಯ ಸಮಯದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ತಿಳಿಸಿದ್ದೆ,.ಅದಕ್ಕೆ ಪುಷ್ಠಿ ನೀಡುವಂತೆ ಸದನದಲ್ಲಿ ಎಚ್. ಡಿ. ಕುಮಾರಸ್ವಾಮಿ ರವರು “ರಾಜಕಾರಣದಲ್ಲಿ ಹೊಂದಾಣಿಕೆ ಸಹಜ ಪ್ರಕ್ರಿಯೆ” ಎನ್ನುವುದರ ಮೂಲಕ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ರವರಿಗೆ ಟಿಕೆಟ್ ಸಿಗುವುದಿಲ್ಲ. ಒಂದು ವೇಳೆ ಟಿಕೆಟ್ ಸಿಕ್ಕರೂ ಕಾಂಗ್ರೆಸ್ಸಿನ ಸಾಮಾನ್ಯ ಕಾರ್ಯಕರ್ತನ ಎದುರು ಸೋಲುವುದು ಖಚಿತ ಎಂದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಮುಖಂಡರಾದ ಗೋಪಾಲ ರೆಡ್ಡಿ. ರಾಮಯ್ಯ. ಮಹಾದೇವಪ್ಪ. ವೆಂಕಟರಾಂ. ಎಸ್ ಗೌಡ. ರಾಮಣ್ಣ. ಸೀನಪ್ಪ. ರಫೀಕ್. ವೆಂಕಟೇಶ್. ಬಾಬು. ಸುರೇಶ್. ದಲಿತ ಮುಖಂಡ ರಾಜಶೇಖರ್ ಇತರರು ಉಪಸ್ಥಿತರಿದ್ದರು.

(ನಮ್ಮಸುದ್ದಿ.ನೆಟ್) nammasuddi.net

ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!