• Mon. Apr 29th, 2024

PLACE YOUR AD HERE AT LOWEST PRICE

ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು. ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದರು.

ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ ಎಂದರು.

ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಕೆ. ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಹಲವು ಸಂಘಟನೆಗಳ ವತಿಯಿಂದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಶ್ರೀಧರ್ ಕಲಿವೀರ, ಬಸವರಾಜ ಕೌತಾಳ್, ಮಂಜು, ಇಂದೂದರ ಹೊನ್ನಾಪುರ, ಹರಿರಾಮ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಡಿ.ಜಿ.ಸಾಗರ್ ಸೇರಿ 35 ಕ್ಕೂ ಅಧಿಕ ಮಂದಿ ದಲಿತ ಮುಖಂಡರು ಮತ್ತು ವಕೀಲರು ಉಪಸ್ಥಿತರಿದ್ದರು.

ರಾಜ್ಯದ ಪರಿಶಿಷ್ಟ ಜಾತಿ ವರ್ಗಗಳ ಜನರು ಸರ್ಕಾರಿ ಸಾಗುವಳಿದಾರರ ಭೂಮಿ ಹಾಗೂ ಇನಾಂ ಮಂಜೂರು ಭೂಮಿಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡಿದ್ದರೂ ಅಂತಹ ಭೂಮಿ ಮಂಜೂರುದಾರರು ಅಥವ ಅವರ ವಾರಸುದಾರರು ಸಂಬಂಧಿಸಿದ ಎ ಸಿ (ಉಪ ವಿಭಾಗ ಅಧಿಕಾರಿಗಳಿಗೆ) ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಈ ಕಾಯ್ದೆ ಪ್ರಕಾರ ತಮ್ಮ ಭೂಮಿಯನ್ನು ವಾಪಸ್ ಪಡೆದು ಕೊಳ್ಳುವ ಹಕ್ಕು ಕೊಡಲಾಗಿದೆ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು, ಲಕ್ಷಾಂತರ ಎಕರೆ ಭೂಮಿಯನ್ನು ದಲಿತರಿಗೆ ವಾಪಸ್ ಕೊಡಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 200 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ.

nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:

ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!