• Sat. Jul 27th, 2024

PLACE YOUR AD HERE AT LOWEST PRICE

ಶ್ರೀನಿವಾಸಪುರ:ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಕಿರುಕುಳ ತಾಳಲಾರದೆ ಬಸ್ ಕಂಡಕ್ಟರ್ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬಸ್ ಕಂಡಕ್ಟರ್ ಸೋಮಾಚಾರಿ ತಮ್ಮದೇ ಮಾವಿನ ತೋಟದಲ್ಲಿ ಮಾವಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು ಎನ್ನಲಾಗಿದೆ.

ಅನಾರೋಗ್ಯದ ಕಾರಣ ಕಛೇರಿ ಕೆಲಸಕ್ಕೆ ನಿಯೋಜನೆ ಮಾಡಿಕೊಂಡಿದ್ದ ಮೃತರಿಗೆ ಮೇಲಧಿಕಾರಿಗಳು ಕೆಲಸದ ವೇಳೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಶ್ರೀನಿವಾಸಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!