ಕೆಜಿಎಫ್
ಕೋಲಾರ
ತಾಲ್ಲೂಕು ಸುದ್ದಿ
ದೇಶ
ನಮ್ಮ ಕೋಲಾರ
ಪ್ರಪಂಚ
ಬಂಗಾರಪೇಟೆ
ಮಾಲೂರು
ಮುಳಬಾಗಿಲು
ರಾಜಕೀಯ
ರಾಜ್ಯ ಸುದ್ದಿ
ಶ್ರೀನಿವಾಸಪುರ
PLACE YOUR AD HERE AT LOWEST PRICE
ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೋಲಾರದಲ್ಲಿ ರೌಡಿಗಳ ಪರೇಡ್ ನಡೆಸಿದರು.
ಕೋಲಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಎಸ್ಪಿ ನಾರಾಯಣ್ ಅವರ ನೇತೃತ್ವದಲ್ಲಿ ಜಿಲ್ಲೆಯ ರೌಡಿಗಳ ಪರೇಡ್ ಮಾಡಿದರು.
ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ವತ್ತುಗಳ ನಾಶ, ಮಟ್ಕಾ, ಗಾಂಜಾ, ಬೆಟ್ಟಿಂಗ್, ಮರಳು ಮಾಫಿಯಾ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ 669 ರೌಡಿ ಶೀಟರ್ ಗಳ ಪೈಕಿ 340 ರೌಡಿ ಶೀಟರ್ ಗಳು ಹಾಜರಿದ್ರು. ಅಲ್ಲದೆ ಈಗಾಗಳೆ ರೌಡಿ ಶೀಟರ್ ಗಳಾಗಿರುವವರು ಮುಂದೆ ಯಾವುದೇ ಪ್ರಕರಗಳಲ್ಲಿ ಕಂಡು ಬಂದರೆ ಗಡಿಪಾರು ಮಾಡುವುದಾಗಿ ಖಡಕ್ ಎಚ್ಚರಿಕೆ ಕೊಟ್ಟರು.
ಇನ್ನೂ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಗೂಂಡಾ ಕಾಯ್ದೆ ಪ್ರಕಾರ ಕ್ರಮಕೈಗೊಂಡಿದ್ದು 19 ಜನರನ್ನ ಗಡಿಪಾರು ಮಾಡಿರುವುದಾಗಿ ತಿಳಿಸಿದರು. ವಯಸ್ಸಿನ ಆಧಾರದ ಮೇಲೆ ಹಾಗೂ ಮುಂದೆ ಕಾನೂನು ಉಲ್ಲಂಘನೆ ಮಾಡದೆ ಯಾವುದೇ ಪ್ರಕರಗಳಲ್ಲಿ ತಮ್ಮ ಹಸ್ತಕ್ಷೇಪ ಇಲ್ಲದಂತಹವರನ್ನ ಗುರುತಿಸಿ ರೌಡಿ ಶೀಟರ್ ನಿಂದ ಮುಕ್ತಿಗೊಳಿಸಲಾಗುವುದು ಎಂದು ತಿಳಿಸಿದರು.
ಅಲ್ಲದೆ ಮುಂದೆ ಗ್ರಾಮಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳು ಎದುರಾಗುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಕಾನೂನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಡಿವೈಎಸ್ಪಿ ಮುರಳೀಧರ್ ಉಪಸ್ಥಿತರಿದ್ದರು.
nammasuddi.net ನಲ್ಲಿ ಜಾಹಿರಾತಿಗಾಗಿ ಸಂಪರ್ಕಿಸಿ:
ಕೆ.ಎಸ್.ಗಣೇಶ್-9448311003. ಸಿ.ವಿ.ನಾಗರಾಜ್-9632188872. ಕೆ.ರಾಮಮೂರ್ತಿ-9449675480.