• Sun. Apr 28th, 2024

PLACE YOUR AD HERE AT LOWEST PRICE

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ ಮಾರಕ ರೋಗಗಳಾದ ಗಂಟಲು ಮಾರಿ, ದಡಾರ, ಪೋಲಿಯೋ, ಡಿಫ್ತೀರಿಯಾ, ಹೆಪಟೈಟಿಸ್ ಬಿ, ಧನುರ್ವಾಯು ಹಾಗೂ ಬಾಲ ಕ್ಷಯ ರೋಗ, ದಡಾರ ರುಬೆಲ್ಲಾ, ನಿಮೊಕಾಕಲ್ ನಿಮೋನಿಯ, ರೋಟಾ ವೈರಸ್ ಮೆದಳು ಜ್ವರ ಈ ಒಂಬತ್ತು ರೋಗಗಳಿಗೆ ಸಂಬಂಧಿಸಿದಂತೆ ಲಸಿಕೆ ನೀಡುವ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. 2 ವರ್ಷದೊಳಗಿನ ಮಕ್ಕಳು, ಗರ್ಭಿಣಿ ಮಹಿಳೆಯರಿಗೆ ನಿಯಮಿತವಾಗಿ ಹಾಗೂ ಉಚಿತವಾಗಿ ನೀಡಲಾಗುವ ಲಸಿಕೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋಲಾರ ತಾಲ್ಲೂಕಿನ ತಹಸಿಲ್ದಾರ್ ಹರ್ಷವರ್ಧನ್ ಅವರು ಹೇಳಿದರು.

ಇಂದು ಕೋಲಾರ ತಾಲ್ಲೂಕು ಕಚೇರಿಯ ಸಭಾಂಗಣದಲಿ ತಾಲ್ಲೂಕು ಆಡಳಿತ ತಾಲ್ಲೂಕು ಪಂಚಾಯಿತಿ ಹಾಗೂ ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ ಅಭಿಯಾನ 5.0 ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಚಾಲನಾ ಸಮಿತಿ ಸಭೆ ಕುರಿತು ಅವರು ಮಾತನಾಡುತ್ತಿದ್ದರು.

ಇಂದ್ರಧನುಷ್ ಎಂದರೆ ಏಳುಬಣ್ಣಗಳ ಮಳೆಬಿಲ್ಲು. ಮಕ್ಕಳಲ್ಲಿ ಕಾಣಿಸುವ ಅಪಾಯಕಾರಿ ಏಳು ರೋಗಗಳನ್ನು ಏಳು ಬಣ್ಣಗಳು ಪ್ರತಿನಿಧಿಸುತ್ತವೆ. ಮಾರಕ ರೋಗಗಳು ಮಕ್ಕಳ ಸಾವಿಗೆ ಕಾರಣವಾಗುತ್ತಿದೆ. ಈ ರೋಗಗಳಿಗೆ ತುತ್ತಾಗದಂತೆ ತಡೆಯಲು ನಿಯಮಿತವಾಗಿ ಗರ್ಭಿಣಿ ಮತ್ತು ಮಕ್ಕಳಿಗೆ ಸೂಕ್ತ ಸಮಯದಲ್ಲಿ ಲಸಿಕೆ ನೀಡುವ ಮೂಲಕ ಮಾತ್ರವೇ ಅಪಾಯವನ್ನು ತಡೆಗಟ್ಟಬಹುದು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಸಿಕೆ ಅಭಿಯಾನವನ್ನು ವೇಗಗೊಳಿಸಲು ಈ ಯೋಜನೆಯನ್ನು ಪರಿಚಯಿಸಿದೆ.

ಜಿಲ್ಲೆಯಲ್ಲಿರುವ ಅಂಗನವಾಡಿ ಮತ್ತು ಶಾಲೆಗಳಲ್ಲಿ ಎಲ್ಲಾ ಮಕ್ಕಳು ನಿಗಧಿತ ಲಸಿಕೆಗಳನ್ನು ಪಡೆದಿದ್ದಾರೆ ಎಂಬುದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಖಾತ್ರಿ ಪಡಿಸಿಕೊಳ್ಳಬೇಕು. ಜಿಲ್ಲೆಯು ರಾಜ್ಯದ ಗಡಿಭಾಗದಲ್ಲಿ ಇರುವುದರಿಂದ ಹೊಟ್ಟೆ ಪಾಡಿನ ಕೆಲಸಕ್ಕಾಗಿ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಅದರಲ್ಲಿಯೂ ಕೂಲಿ ಕಾರ್ಮಿಕರು, ಕಲ್ಲು ಗಣಿಗಾರಿಕೆ ಕೆಲಸ ನಿರ್ವಹಿಸುವ ಕಾರ್ಮಿಕರು ಪ್ಯಾಕ್ಟರಿ ಮುಂತಾದ ಸ್ಥಳಗಳಿಗೆ ಕೆಲಸಕ್ಕಾಗಿ ಹೋಗುವ ಕಾರ್ಮಿಕರು ಅವರ ಮಕ್ಕಳಿಗೆ ನಿಯಮಿತವಾದ ಲಸಿಕೆಗಳನ್ನು ನೀಡಲಾಗಿದೆ ಎಂಬುದನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ವಲಸೆ ಕಾರ್ಮಿಕರ ಮಕ್ಕಳು ಈ ಅಭಿಯಾನದಿಂದ ಹೊರಗೊಳಿಯುವುದನ್ನು ತಪ್ಪಿಸಬೇಕು. ಸಾರ್ವಜನಿಕರಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂದ್ರಧನುಷ್ ಯೋಜನೆ ಬಗ್ಗೆ ಅಧಿಕಾರಿಗಳು ಜಾಗೃತಿಯನ್ನು ಮೂಡಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಎ ವಿ ನಾರಾಯಣಸ್ವಾಮಿ ಅವರು ಮಾತನಾಡಿ ಇಂದ್ರ ಧನುಷ್ ಯೋಜನೆಯ ಅಭಿಯಾನದಡಿ ಆಗಸ್ಟ್ 07 ರಿಂದ 12, ಸೆಪ್ಟೆಂಬರ್ 09 ರಿಂದ 14 ಹಾಗೂ ಆಕ್ಟೊಬರ್ ಮಾಹೆಯಲ್ಲಿ 11ರಿಂದ 16 ರವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪೋಷಕರು ಈ ಅಭಿಯಾನದ ಪ್ರಯೋಜನವನ್ನು ಪುರ್ಣ ಪ್ರಮಾಣದಲ್ಲಿ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಕೋಲಾರ ತಾಲ್ಲೂಕು ವ್ಯಾಪ್ತಿಯಲ್ಲಿ ನಕಲಿ ಕ್ಲಿನಿಕ್ ಗಳು ಹಾಗೂ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಈಗಾಗಲೇ ಹಲವು ನಕಲಿ ಕ್ಲಿನಿಕ್ ಗಳ ಮೇಲೆ ತಾಲ್ಲೂಕು ದಂಡಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅನಿರೀಕ್ಷಿತ ದಾಳಿ ಮಾಡಿ ನೋಟಿಸ್ ಗಳನ್ನು ನೀಡಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಮುಕ್ತವಾಗಿ ಇಲಾಖೆಯ ಅಧಿಕಾರಿಗೆ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.

ಎಲ್ಲಾ ಇಲಾಖೆಗಳ ಸಹಕಾರದಿಂದ ಜಿಲ್ಲೆಯಲ್ಲಿ ಇರುವ ನಕಲಿ ಕ್ಲಿನಿಕ್ ಗಳನ್ನು ಮುಚ್ಚಬೇಕು ಇದರಿಂದ ಸಾರ್ವಜನಿಕರ ಜೀವವನ್ನು ಅಪಾಯದಲ್ಲಿ ದೂಡುವುದನ್ನು ತಪ್ಪಿಸಬಹುದಾಗುತ್ತದೆ. ಯಾವುದೇ ವೈದ್ಯಕೀಯ ವಿದ್ಯಾಹರ್ತೆ ಪಡೆಯದೆ ಕೆಲವು ವೈದ್ಯಕೀಯ ಸಂಸ್ಥೆಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಲಾಗಿದೆ. ಇಂತಹ ಪ್ರಕರಣಗಳು ಹೆಚ್ಚು ಗ್ರಾಮೀಣ ಪ್ರದೇಶದಲ್ಲಿ ಕಂಡುಬರುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊದಲು ಜಾಗೃತಿ ಮೂಡಿಸುವುದರಿಂದ ಜನರಿಗೆ ನಕಲಿ ವೈದ್ಯರ ಅಥವಾ ವೈದ್ಯಕೀಯ ಸಂಸ್ಥೆ ಬಗ್ಗೆ ತಿಳಿಯುತ್ತದೆ.

ಜಿಲ್ಲಾ ಫ್ಲೋರೋಸಿಸ್ ಸಲಹೆಗಾರರಾದ ಅರ್ಚನಾ ಅವರು ಮಾತನಾಡಿ ಕೋಲಾರ ಜಿಲ್ಲೆಯನ್ನು ಫ್ಲೊರೋಸಿಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು. ಸತತ 10 ವರ್ಷಗಳಿಂದ ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಹಾಗೂ ತಡೆಗಟ್ಟುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ, ಫ್ಲೋರೈಡ್ ಅಂಶ ಹೆಚ್ಚಾಗಿರುವ ಆಹಾರ ಹಾಗೂ ನೀರು ಸೇವನೆಯಿಂದ ಫ್ಲೋರೋಸಿಸ್ ಕಾಯಿಲೆ ಬರುತ್ತದೆ ಎಂದು ತಿಳಿಸಿದರು.

ಈ ಖಾಯಿಲೆಯ ಲಕ್ಷಣಗಳೆಂದರೆ ಹಲ್ಲುಗಳ ಬಣ್ಣ ಬದಲಾವಣೆ ಹಳದಿ ಹಾಗೂ ಕಂದು ಬಣ್ಣ ಕಂಡುಬರುತ್ತದೆ, ಮೂಳೆ ಕೀಲುಗಳಲ್ಲಿ ವಿಪರೀತ ನೋವು ಉಂಟಾಗುತ್ತದೆ, ಹೆಚ್ಚು ಮೂತ್ರ ವಿಸರ್ಜಿಸುವುದು ಹಾಗೂ ನಿಶಕ್ತಿ ಉಂಟು ಮಾಡುತ್ತದೆ, ಫ್ಲೋರೋಸಿಸ್ ರೋಗವನ್ನು ನಿಯಂತ್ರಿಸಲು ವಿಟಮಿನ್ ಸಿ ಅಂಶವು ಹೆಚ್ಚಿರುವ ನಿಂಬೆ, ನೆಲ್ಲಿಕಾಯಿ, ಕಿತ್ತಳೆ, ಮೋಸಂಬಿ, ಸೀಬೆ, ಹಣ್ಣುಗಳನ್ನು ಹಾಗೂ ಕ್ಯಾಲ್ಸಿಯಂ ಹೆಚ್ಚಿರುವ ಪದಾರ್ಥಗಳಾದ ಹಾಲು, ಬೆಲ್ಲ ಹಸಿ ಸೊಪ್ಪು ತರಕಾರಿಗಳು ರಾಗಿಮುದ್ದೆ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಹಾಗೂ ಫ್ಲೋರೈಡ್ ಮುಕ್ತ ಶುದ್ಧ ಕುಡಿಯುವ ನೀರನ್ನು ಬಳಕೆ ಮಾಡುವುದರಿಂದ ಫ್ಲೋರೋಸಿಸ್ ರೋಗವನ್ನು ನಿಯಂತ್ರಿಸಬಹುದು.

ನಿಯಮಿತವಾಗಿ ಮೂತ್ರ ಪರೀಕ್ಷೆ ಹಾಗೂ ನೀರಿನ ಪರೀಕ್ಷೆಯ ಮೂಲಕ ಫ್ಲೋರೋಸಿಸ್ ಅಂಶ ದೇಹ ಅಥವಾ ನೀರಿನಲ್ಲಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಫ್ಲೋರೋಸಿಸ್ ತಡೆ ಹಾಗೂ ನಿಯಂತ್ರಣಾ ಕಾರ್ಯಕ್ರಮದ ಕರಪತ್ರಗಳು ಹಾಗೂ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆರ್. ಸತ್ಯನಾರಾಯಣಗೌಡ, ಐ.ಎಂ.ಎ ಸಂಸ್ಥೆಯ ಡಾ.ನಾರಾಯಣಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!