• Sun. Apr 28th, 2024

PLACE YOUR AD HERE AT LOWEST PRICE

ಕೆಜಿಎಫ್:ವಿದ್ಯಾರ್ಥಿಗಳ ಭವಿಷ್ಯಕ್ಕೆ ಪದವಿ ಶಿಕ್ಷಣದ ಪಲಿತಾಂಶ ಬಹುಮುಖ್ಯವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಆಸಕ್ತಿ ವಹಿಸಿ ಉತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ತಮ್ಮ ಅಮೂಲ್ಯ ಜೀವನಕ್ಕೆ ಅಡಿಪಾಯ ಹಾಕಿಕೊಳ್ಳಬೇಕೆಂದು ಗ್ರಾಮೀಣ ವಿದ್ಯಾ ಸಂಸ್ಥೆಯ ನಿರ್ದೇಶಕ ವಿಜೇಂದ್ರ ಹೇಳಿದರು.

ಬೇತಮಂಗಲದ ಗ್ರಾಮೀಣ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ವಿದ್ಯಾ ಸಂಸ್ಥೆವತಿಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಸಹ ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಬೇಕೆಂದರು.

ಕಾಲೇಜಿನ ಯಾವುದೇ ವಿದ್ಯಾರ್ಥಿಯ ವಿದ್ಯಾಭ್ಯಾಸದಲ್ಲಿ ಯಾವುದೇ ಸಮಸ್ಯೆ ಇದ್ದರು ಸಹ ತಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಗಮನಕ್ಕೆ ತರಬಹುದು ಹಾಗೂ ವಿದ್ಯಾರ್ಥಿಗಳ ಸಾಧನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಹ ತೋಡಗಿಸಿಕೊಳ್ಳಲು ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.

ಈ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಅನೇಕ ವಿದ್ಯಾರ್ಥಿಗಳು ಉನ್ನತ ಮಟ್ಟದ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನೀವು ಸಹ ಉನ್ನತ ಮಟ್ಟಕ್ಕೆ ಬರಬೇಕೆಂದು ಕಿವಿ ಮಾತು ನುಡಿದರು.

ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವಿಜೇಂದ್ರ, ಪಿಯು ಕಾಲೇಜು ಪ್ರಾಂಶುಪಾಲ ಮಲ್ಲಿಕಾರ್ಜುನ್, ಉಪನ್ಯಾಸಕರಾದ ರೂಪ, ಮನೋಹರ್, ಗಾಯಿತ್ರಿ, ವೆಂಕಟೇಶ್ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!