• Sat. Apr 27th, 2024

PLACE YOUR AD HERE AT LOWEST PRICE

 

ಸೌದಿ ಅರೇಬಿಯಾದಲ್ಲಿ ನಡೆದ ಸ್ನೂಕರ್ ವಿಶ್ವಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ಯುವತಿ ಕುಮಾರಿ.ಕೀರ್ತನಾ ಪಾಂಡಿಯನ್ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ, ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಹಿಂದೆ ವಿಶ್ವಚಾಂಪಿಯನ್ ಟೂರ್ನಿಯಲ್ಲಿ ಕಂಚು, ಬೆಳ್ಳಿ ಪದಕ ಗೆದ್ದು ಸಾಧನೆ ಮಾಡಿದ್ದ ಕೀರ್ತನಾ ಪಾಂಡಿಯನ್ ಈ ಬಾರಿ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

ಕೋಲಾರ ಜಿಲ್ಲೆಯ ಯುವ ಸಮೂಹಕ್ಕೆ ಸಾಧನೆಯ ಮೆಟ್ಟಿಲು ಕಠಿಣವಾದರೂ ಛಲವಿದೆ ಬಿಡದೇ ಸಾಧಿಸುವ ಮನಸ್ಸಿದೆ ಅನ್ನೋದಕ್ಕೆ ಕೀರ್ತನಾ ಉದಾಹರಣೆಯಾಗಿದ್ದಾರೆ. ಅಂಡರ್ ೧೬ನಲ್ಲಿ ಬೆಳ್ಳಿ, ಅಂಡರ್ ೧೮ ನಲ್ಲಿ ಕಂಚು ಗೆದ್ದಿದ್ದ ಕೀರ್ತನಾ ಇದೀಗ ಅಂಡರ್ ೨೧ನಲ್ಲಿ ಚಿನ್ನಕ್ಕೆ ಮುತ್ತಿಟ್ಟು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದಾಸರಹೊಸಹಳ್ಳಿ ನಿವಾಸಿ ಹಾಗೂ ಕೆಜಿಎಫ್‌ನಲ್ಲಿರುವ ಕೇಂದ್ರ ಸಾರ್ವಜನಿಕ ಉದ್ದಿಮೆ ಬಿಇಎಂಲ್ ಕಾರ್ಖಾನೆಯ(ಡಿಜಿಎಂ) ಪಾಂಡಿಯನ್ ಹಾಗೂ ಜಯಲಕ್ಷ್ಮಿ ದಂಪತಿಗಳ ದ್ವಿತೀಯ ಪುತ್ರಿ ಕೀರ್ತನಾ ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾಳೆ. ಕೆಜಿಎಫ್‌ನ ಮಹಾವೀರ್ ಜೈನ್ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಕೀರ್ತನಾ ಸದ್ದಿಲ್ಲದೇ ಸ್ನೂಕರ್ ಕ್ರೀಡೆಯಲ್ಲಿ ತನ್ನದೇ ಛಾಪು ಮೂಡಿಸುತ್ತಾ ಸಾಗಿದ್ದಾಳೆ.

ಕೀರ್ತನಾ ತಂದೆ ಪಾಂಡಿಯನ್ ಕೆಜಿಎಫ್ ನಲ್ಲಿರುವ ಬಿಇಎಂಎಲ್ ಆಫಿರ‍್ಸ್ ಕ್ಲಬ್‌ನಲ್ಲಿ ಡಿಜಿಎಂ ಆಗಿ ಕೆಲಸ ಮಾಡುತ್ತಿದ್ದು, ತಾಯಿ ಜಯಲಕ್ಷ್ಮಿ ಗೃಹಿಣಿಯಾಗಿದ್ದಾರೆ. ಚಿಕ್ಕಂದಿನಿoದಲೇ ತಂದೆಯ ಜೊತೆಗೆ ಕ್ಲಬ್‌ಗೆ ಹೋಗುತ್ತಿದ್ದ ಕೀರ್ತನಾ ತನ್ನ ತಂದೆಯಿoದಲೇ ಪ್ರೇರಣೆ ಪಡೆದು ಸ್ನೂಕರ್‌ನ ಕೈಗೆತ್ತಿಕೊಂಡಿದ್ದಳು. ಬಿಡುವಿನ ವೇಳೆಯಲ್ಲಿ ತಂದೆಯೊoದಿಗೆ ಬಿಲಿಯರ್ಡ್ಸ್ನಲ್ಲಿ ಅಭ್ಯಾಸ ಮಾಡುತ್ತಿದ್ದರು.

ತನ್ನ ೧೩ನೇ ವಯಸ್ಸಿಗೇ ಬಾಲ್ ಹೊಡೆಯಲಾರಂಭಿಸಿದ ಕೀರ್ತನಾ ೧೬ನೇ ವಯಸ್ಸಿಗೆ ಹತ್ತನೇ ತರಗತಿ ಓದುತ್ತಿರುವಾಗಲೇ ವಿಶ್ವ ಕಿರಿಯರ ಪಂದ್ಯದಲ್ಲಿ ಕಂಚಿನ ಪದಕ ಗೆದ್ದು ಇಡೀ ದೇಶದ ಗಮನ ಸೆಳೆದಿದ್ದರು. ರಾಷ್ಟ್ರೀಯ, ಮಟ್ಟದಲ್ಲಿ ಇದುವರೆಗೂ ಸುಮಾರು ೨೦ಕ್ಕಿಂತ ಹೆಚ್ಚು ಪದಕಗಳನ್ನ ಬಾಚಿಕೊಂಡಿದ್ದಾರೆ. ಇದೀಗ ಅಂತರಾಷ್ಟ್ರೀಯ, ಮಟ್ಟದಲ್ಲಿ ಚಿನ್ನದ ಕಪ್ ಗೆದ್ದು ಸಾಧನೆ ಮಾಡಿದ್ದಾರೆ.

೨೦೧೭ರಲ್ಲಿ ಚೀನಾದಲ್ಲಿ ನಡೆದ ಅಂಡರ್ ೧೯ ಟೂರ್ನಿಯಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು, ೨೦೧೮ರಲ್ಲಿ ರಷ್ಯಾದಲ್ಲಿ ಬೆಳ್ಳಿ ಪದಕ ಹಾಗೂ ಚಿನ್ನದ ಪದಕ, ೨೦೨೨ರಲ್ಲಿ ರೋಮೇನಿಯಾದಲ್ಲಿ ಕಂಚು ಗೆದ್ದು ಇದೀಗ ಅಂಡರ್ ೨೧ನಲ್ಲಿ ಸೌದಿ ಅರೇಬಿಯಾದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಮುಂದೆ ಪ್ರೊಫೆಷನಲ್ಸ್ ಕ್ಲಬ್‌ಗಳಲ್ಲಿ ಭಾಗವಹಿಸಬೇಕು, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡೆಗಳಲ್ಲೂ ಪದಕಗಳನ್ನು ಗೆಲ್ಲಬೇಕು ಎಂಬುದು ಈಕೆಯ ಹೆಬ್ಬಯಕೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!