• Thu. Apr 25th, 2024

PLACE YOUR AD HERE AT LOWEST PRICE

ಕೋಲಾರ ಜು.೨೬ : ಜಿಲ್ಲೆಗೆ ಮೊದಲ ತ್ರೆ?ಮಾಸಿಕದಲ್ಲಿ ಬಿಡುಗಡೆ ಮಾಡಲಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಆರೋಗ್ಯ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ರವರು ತಿಳಿಸಿದರು.

ಇಂದು ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ವೈದ್ಯರು, ಸಿ.ಎಂಓಗಳು ಸೇರಿದಂತೆ ೧೧೪೬ ಅಧಿಕಾರಿ ಹಾಗೂ ಸಿಬ್ಬಂದಿ ಕೊರತೆ ಇರುವುದನ್ನು ಗಮನಿಸಲಾಗಿದೆ. ಈ ಬಗ್ಗೆ ವಿಶದವಾಗಿ ಚರ್ಚಿಸಿ ಸಮರ್ಪಕ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.

ಹೊರಗುತ್ತಿಗೆ ಮೂಲಕ ಪಡೆಯಬಹುದಾದ ಹುದ್ದೆಗಳಿಗೆ ಆಯಾ ಖಾಸಗಿ ಸಂಸ್ಥೆಗಳ ಮೂಲಕ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಈಗಾಗಲೇ ಅನುಮತಿ ನೀಡಲಾಗಿದೆ. ಅನುಮತಿ ಇಲ್ಲದ ಹುದ್ದೆಗಳಿಗೆ ಸರ್ಕಾರದ ವತಿಯಿಂದ ಶೀಘ್ರವಾಗಿ ಅನುಮತಿ ಕೊಡಿಸುವ ಕೆಲಸ ಮಾಡಲಾಗುವುದು ಎಂದರು. ಜಿಲ್ಲೆಯ ಜನತೆ ಆಯುಷ್ಮಾನ್ ಭಾರತ್ ಯೋಜನೆಯ ವಿಮಾ ಕಾರ್ಡ್ಗಳನ್ನು ಹೊಂದುವುದರಲ್ಲಿ ಹಿಂದೆ ಬಿದ್ದಿದ್ದಾರೆ. ಈ ವಿಮಾ ಕಾರ್ಡ್ಗಳಿಂದ ಹಲವು ರೋಗಗಳಿಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಪ್ರಯೋಜನವನ್ನು ಪಡೆಯಲು ಸಾರ್ವಜನಿಕರು ಮುಂದಾಗಬೇಕು ಅವರುಗಳಿಗೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಎಂದು ತಿಳಿಸಿದರು.

ಆಭಾ ಮತ್ತು ಆಯುಷ್ಮಾನ್ ಕಾರ್ಡ್ಗಳನ್ನು ಪ್ರತಿ ಒಳರೋಗಿಗೆ ಕಡ್ಡಾಯ ಮಾಡುವುವುದರಿಂದ ಶೀಘ್ರವಾಗಿ ಗುರಿ ತಲುಪಬಹುದು. ವಿಮಾ ಕಾರ್ಡ್ಗಳನ್ನು ವಿತರಿಸುವುದರಲ್ಲಿ ಕೋಲಾರ ಜಲ್ಲೆಯನ್ನು ಅಗ್ರ ಮಾನ್ಯ ಜಿಲ್ಲೆಗಳಲ್ಲಿ ನೋಡಬೇಕೆಂಬುದು ನನ್ನ ಹಂಬಲ. ಅದರಂತೆಯೇ ಜಿಲ್ಲೆಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿಯನ್ನು ಅಧಿಕಾರಿಗಳು ಹೊಂದಬೇಕು.
ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಈ ಕಚೇರಿಯನ್ನು ಕಡ್ಡಾಯವಾಗಿ ಬಳಸಬೇಕು ಇದರಿಂದ ಆಡಳಿತದಲ್ಲಿ ಪಾರದರ್ಶಕತೆ ತರಬಹುದಾಗಿದೆ. ಈ ಬಗ್ಗೆ ಅಧಿಕಾರಿ ನೌಕರರು ಹೊಂದಿರುವ ನಿರುತ್ಸಾಹ ಹಾಗೂ ಹಿಂಜರಿಕೆಯನ್ನು ಬದಿಗಿಟ್ಟು ಕಾರ್ಯ ನಿರ್ವಹಿಸಬೇಕು.ಎಂದರು.

ಜಿಲ್ಲೆಯ ಬಹುತೇಕ ರೈತಾಪಿ ವರ್ಗದ ಜನರು ತಮ್ಮ ತಮ್ಮ ಕೆಲಸಗಳನ್ನು ಮುಗಿಸಿಕೊಂಡು ಸಂಜೆ ಮೇಲೆ ಭ್ಯವಾಗುವುದರಿಂದ ಪ್ರಸ್ತುತ ಈ ಗಿರುವ ನಮ್ಮ ಕ್ಲಿ?ನಿಕ್ಗಳ ಸಮಯವನ್ನು ಮರುನಿಗದಿಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ಗರ್ಭಿಣಿಯರು ಹೆರಿಗೆಯಲ್ಲಿ ಸಾವನ್ನಪ್ಪುವ ೫ ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಪ್ರಮಾಣವನ್ನು ಜಿಲ್ಲೆಯ ಅತ್ಯಂತ ಅನುಭವಿ ವೈದ್ಯರಿದ್ದಾಗ್ಯೂ ಮುಂಜಾಗ್ರತಾ ಕ್ರಮ ವಹಿಸಿ ಕಡಿಮೆ ಮಾಡಬಹುದಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೃತಕ ಹೆರಿಗೆ ಪ್ರಮಾಣ ಜಾಸ್ತಿ ಯಾಗುತ್ತಿದ್ದು ಇದನ್ನು ತಡೆಯಬೇಕು ಬದಲಿಗೆ ಸಾಧ್ಯವಾದಷ್ಟು ನೈಸರ್ಗಿಕ ಹೆರಿಗೆ ಪದ್ದತಿಯಲ್ಲೆ? ಹೆರಿಗೆ ಮಾಡಿಸಲು ಕ್ರಮ ವಹಿಸಬೇಕು ಎಂದರು. ಜಿಲ್ಲೆಯಲ್ಲಿ ನವಜಾತ ಶಿಶುಗಳಿಗೆ ಸರ್ಕಾರದಿಂದ ನೀಡಲಾಗುವ ಕಡ್ಡಾಯ ಲಸಿಕೆಗಳನ್ನು ತಪ್ಪದೇ ಕೊಡಿಸಬೇಕು. ಈ ನಿಟ್ಟಿನಲ್ಲಿ ಮಿಷನ್ ಇಂದ್ರಧನುಷ್ ಅಭಿಯಾನವನ್ನು ಚುರುಕುಗೊಳಿಸಿ ಯಾವುದೇ ಮಗು ಯಾವದೇ ಕಾರಣಕ್ಕೆ ಈ ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

ತಾಲ್ಲೂಕು ಮಟ್ಟದಲ್ಲಿ ಅನುದಾನ ಬಳಕೆ ಸಮರ್ಪಕವಾಗಿ ಆಗುತ್ತಿಲ್ಲ. ಇದರಲ್ಲಿ ಸಾರ್ವಜನಿಕರಿಗೆ ಖಾಸಗಿ ಔಷದಾಲಯಗಳಿಗೆ ಕಳುಹಿಸುವ ಬದಲು ನೀಡಬಹುದಾದ ಔಷಧಗಳನ್ನು ಖರೀದಿಸಿ ಉಚಿತವಾಗಿ ವಿತರಿಸುವಂತೆ ಎಲ್ಲ ತಾಲ್ಲೂಕು ಅಧಿಕಾರಿಗಳಿಗೆ ಸೂಚಿಸಿದರು.ಹಾಗೆಯೇ ನಕಲಿ ಕ್ಲಿ?ನಿಕ್ಗಳ ಹಾಗೂ ನಕಲಿ ಸ್ಕ್ಯಾನಿಂಗ್ ಕೇಂದ್ರಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಖಾಸಗಿ ಆಸ್ಪತ್ರೆಗಳೊಂದಿಗೆ ಚರ್ಚಿಸಿ ಇವುಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಅವುಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷರವರಿಗೆ ವಿನಂತಿಸಿದರು.

ಸಭೆಗೂ ಮುನ್ನ ಬೆಳಿಗ್ಗೆ ನಗರದ ಕೆ ಎನ್ ಸ್ಯಾನಿಟೋರಿಯಂನಲ್ಲಿ ಸ್ಥಾಪಿಸಲಾಗಿರುವ ಡಿಎನ್ಸಿ ಸಮಾಲೋಚನಾ ಕೇಂದ್ರ, ವೇಮಗಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೇಡಿಹಾಳ ಆರೋಗ್ಯ ಕ್ಷೆ?ಮ ಕೇಂದ್ರಗಳಿಗೆ ಭೇಟಿನೀಡಿ ಅಲ್ಲಿ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿರುವ ವರ್ಚುವಲ್ ಸಮಾಲೋಚನಾ ಕೇಂದ್ರಗಳ ಬಗ್ಗೆ ಮಾಹಿತಿಯನ್ನು ಪಡೆದರು. ಇಂತಹ ಜನಸ್ನೆ?ಹಿ ಕಾರ್ಯಕ್ರಮಗಳು ನಮ್ಮನ್ನು ಇನ್ನಷ್ಟು ಜನಪರವಾಗಿ ಕೆಲಸ ಮಾಡಲು ಪ್ರೆ?ರೇಪಿಸುತ್ತವೆ. ಟಾಟಾ ಕನ್ಸಲ್ಟೆನ್ಸಿ ಸಂಸ್ಥೆಯ ಈ ಕಾರ್ಯ ಅತ್ಯಂತ ಶ್ಲಾಘನೀಯ. ಇಂತಹ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರದ ಸಂಪುರ್ಣ ಬೆಂಬಲ ನೀಡಲಾಗುವುದು ಎಂದರು.

ಸಭೆಯಲ್ಲಿ ಶಾಸಕರಾದ ಡಾ.ಜಿ. ಕೊತ್ತೂರು ಮಂಜುನಾಥ್, ಜಿ.ಕೆ ವೆಂಕಟಶಿವಾರೆಡ್ಡಿ, ರೂಪಕಲಾ ಎಂ ಶಶಿಧರ್. ಎಂ.ಎಲ್.ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಆರೋಗ್ಯ ಮತ್ತುಕುಟುಂ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಇಲಾಖೆಯ ಆಯುಕ್ತರಾದ ರಂದೀಪ್ ದೇವ್, ರಾಷ್ಟ್ರಿ?ಯ ಆರೋಗ್ಯ ಮಿಷನ್ ನಿರ್ದೇಶಕರಾದ ಡಾ. ವೈ. ನವೀನ್ ಭಟ್ ,ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ, ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!