• Wed. May 1st, 2024

PLACE YOUR AD HERE AT LOWEST PRICE

ಮಣಿಪುರದಲ್ಲಿ ಕುಕಿ ಜನಾಂಗದ ಮಹಿಳೆಯರನ್ನು ಬೆತ್ತಲೆಗೊಳಿಸಿ ನಡುಬೀದಿಯಲ್ಲಿ ಮೆರವಣಿಗೆ ಮಾಡಿ ಚಿತ್ರಹಿಂಸೆ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆಯನ್ನು ಖಂಡಿಸಿ, ದೌರ್ಜನ್ಯಕೋರನ್ನು ಕೂಡಲೆ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ರ್ಟಪತಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದ ಬಿಎಸ್‌ಪಿ ವತಿಯಿಂದ ಘನತೆವೆತ್ತ ರಾಷ್ರ್ಟಪತಿಗಳು ಮಣಿಪುರದ ಜನರ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮಣಿಪುರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು ಬಿರೇನ್ ಸಿಂಗ್ ಮುಖ್ಯಮಂತ್ರಿಯಾಗಿದ್ದು, ಅಬ್ಬರದ ಪ್ರಚಾರದಿಂದ ಅಧಿಕಾರಕ್ಕೆ ಬಂದ ಮೇಲೆ ಕುಕಿ ಸಮುದಾಯದ ವಿರುದ್ಧ ಹಿಂಸಾಚಾರ ನಿಲ್ಲಿಸದೆ ಮೈತೇಯಿ ಸಮುದಾಯದ ಪರವಾಗಿ ಪಕ್ಷಪಾತದಿಂದ ಮುಖ್ಯಮಂತ್ರಿಯು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತ ದೇಶವು ಬಹುಭಾಷೆ, ಬಹುಜಾತಿ, ಬಹುಧರ್ಮ ಬಹು ಸಂಸ್ಕೃತಿಯನ್ನು ಹೊಂದಿದ್ದ ದೇಶ, ಭಾರತ ದೇಶದಲ್ಲಿರುವ ೧೪೦ ಕೋಟಿ ಜನರ ಪ್ರಾಣ ಆಸ್ತಿ, ಮಾನ ರಕ್ಷಣೆ ಮಾಡುವುದು ಸಂವಿಧಾನದ ಆಶಯವಾಗಿದೆ. ಇಷ್ಟೆಲ್ಲಾ ಅಮಾನುಷ ಕೃತ್ಯಗಳು ನಡೆಯುತ್ತಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿಯವರು ಏನೂ ಸಂಬoಧವಿಲ್ಲದoತೆ ಕಣ್ಣುಮುಚ್ಚಿ ಕುಳಿತಿರುವುದು ನಾಚಿಕೆಗೇಡು ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನೈತಿಕ ಹೊಣೆ ಹೊತ್ತು ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಎಸ್.ಬಿ.ಸುರೇಶ್, ಜಿಲ್ಲಾ ಉಪಾಧ್ಯಕ್ಷ ಎಂ.ರಮಣ್‌ಕುಮಾರ್, ತಾಲ್ಲೂಕು ಅಧ್ಯಕ್ಷರುಗಳಾದ ಮಾಲೂರು ಎನ್. ರಮೇಶ್, ಮುನಿಕೃಷ್ಣ, ಬಂಗಾರಪೇಟೆ ಜ್ಯೋತೀಶ, ಅಂಬರೀಶ್, ವೆಂಕಟೇಶ್, ಗೋವಿಂದರಾಜು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!