• Thu. May 9th, 2024

PLACE YOUR AD HERE AT LOWEST PRICE

ಕೆಜಿಎಫ್:ಇತ್ತೀಚಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಹೆಸರಿನಲ್ಲಿ ಯುವಕ- ಯುವತಿಯರನ್ನು ವಂಚಿಸಿ ದೂರದ ಪ್ರದೇಶಗಳಿಗೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆಂದು ಕೆಜಿಎಫ್ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಗಣಪತಿ ಗುರುಸಿದ್ಧ ಬಾದಾಮಿ ಅವರು ತಿಳಿಸಿದರು.

ಅವರು ಬೇತಮಂಗಲದ ಅಶ್ವಿನಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಉದ್ಟಾಟಿಸಿ ಮಾತನಾಡಿದರು.

ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವ ನಿರುದ್ಯೋಗಿಗಳಿಗೆ ನಕಲಿ ಖಾಸಗಿ ಕಂಪನಿಗಳ ಹೆಸರಿನಲ್ಲಿ ಹೆಚ್ಚು ಸಂಬಳ ನೀಡುವುದಾಗಿ ಪ್ರಕಟಣೆಗಳಲ್ಲಿ ತಿಳಿಸಿ ಯುವಕರು ಹಾಗೂ ಯುವತಿಯರನ್ನು ನೇಮಕಾತಿ ಮಾಡಿಕೊಂಡು ವಿದೇಶಗಳಿಗೆ ಸಾಗಾಣಿಕೆ ಮಾಡುತ್ತಿದ್ದಾರೆ, ನಿರುದ್ಯೋಗಸ್ಥರು ಎಚ್ಚರಿಕೆ ವಹಿಸಬೇಕು ಎಂದರು.

 ಬಡ ಮಕ್ಕಳು ಹಾಗೂ ಒಂಟಿಯಾಗಿ ಒಡಾಡುವಂತಹ ಸಣ್ಣ ವಯಸ್ಸಿನ ಮಕ್ಕಳನ್ನು ಕಳ್ಳತನ ಮಾಡಿಕೊಂಡು ಕೈಗಾರಿಕೆಗಳಲ್ಲಿ ಹೆಚ್ಚು ಸಮಯ ದುಡುಮೆ ಮಾಡಿಸಿಕೊಳ್ಳುತ್ತಾರೆ, ಇನ್ನೂ ಹಲವು ಮಕ್ಕಳ ಅಂಗಾAಗಗಳನ್ನು ಮಾರಾಟ ಮಾಡಿಕೊಳ್ಳುತ್ತಾರೆ, ಅದರಿಂದ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾರೇ ಮಕ್ಕಳು ಕಳ್ಳತನವಾದರೂ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ತಿಳಿಸಿದರು.

ವಿಶ್ವ ಸಂಸ್ಥೆಯೂ ಮಾನವ ಕಳ್ಳ ಸಾಗಾಣಿಕೆ ತಡೆಯುವ ದೃಷ್ಠಿಯಿಂದ ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತಂದಿದೆ, ಸಣ್ಣ ಮಕ್ಕಳನ್ನು ಕಳ್ಳತನ ಮಾಡಿದರೆ ೭ ವರ್ಷ ಜೈಲು ಹಾಗೂ ಮರಣದಂಡನೆಯನ್ನು ಸಹ ವಿಧಿಸಲಾಗುವುದು ಎಂದರು. ಇಂತಹ ಕಳ್ಳ ಸಾಗಾಣಿಕೆಯಲ್ಲಿ ಸರ್ಕಾರಿ ನೌಕರರ ಭಾಗಿಯಾಗಿದ್ದಾರೂ ಸಹ ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.

ನ್ಯಾಯಧೀಶರು ಹಾಗೂ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಮುಜಫರ್ ಎಂ.ಮAಜರಿ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯನ್ನು ತಡೆಯುವ ಸಲುವಾಗಿ ವಿಶ್ವ ಸಂಸ್ಥೆಯೂ ೨೦೧೪ರಲ್ಲಿ ಜು.೩೦ರಂದು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಆಚರಿಸಲಾಯಿತು, ಭಾರತ ದೇಶದಲ್ಲಿ ಕರ್ನಾಟಕ ರಾಜ್ಯವು ಮಾನವ ಕಳ್ಳ ಸಾಗಾಣಿಕೆಯಲ್ಲಿ ಮೂರನೇ ಸ್ಥಾನದಲ್ಲಿದೆ ಎಂದರು.

ಕೆಜಿಎಫ್ ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲ್ ಗೌಡ, ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಬೇತಮಂಗಲ ವೃತ್ತ ನಿರೀಕ್ಷಕ ಸುರೇಶ್ ರಾಜು ಮಾನವ ಕಳ್ಳ ಸಾಗಾಣಿಕೆಯ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಪದ್ಮಾವತಿ, ಕಾರ್ಮಿಕ ಇಲಾಖೆಯ ಕಿರಣ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಾಜೇಶ್, ಬೇತಮಂಗಲ ಪಿಎಸೈ ಸತೀಶ್, ಶಿಕ್ಷಣ ಇಲಾಖೆಯ ಅಶ್ವಥ್, ಮಹಿಳಾ ಸಾಂತ್ವನ ಕೇಂದ್ರದ ಕಾರ್ಯದರ್ಶಿ ಡಾ.ಗೋಪಾಲ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶ್, ಪವಿತ್ರ, ವಿನೋದ, ಪ್ರಸನ್ನ, ವಕೀಲ ಮಗ್ಗಿ ಸೇರಿದಂತೆ ಅAಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಸಹಾಯಕಿಯರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!