• Thu. May 9th, 2024

PLACE YOUR AD HERE AT LOWEST PRICE

ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಗುಜರಾತಿನಲ್ಲಿ ಪತ್ತೆಯಾಗಿದೆ.

ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಬೇಕಿದ್ದ ಲಾರಿ ಗುಜರಾತ್​ನ ಅಹಮದಾಬಾದ್​ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಚಾಲಕ ಅನ್ವರ್​ ಲಾರಿಯಲ್ಲಿ ಅಳವಡಿಸಿದ್ದ ಜಿಪಿಎಸ್ ಕಿತ್ತೆಸೆದು ಅಹಮದಾಬಾದ್​ಗೆ ಚಲಾಯಿಸಿಕೊಂಡು ಹೋಗಿದ್ದಾನೆ. ಬಳಿಕ ಅಲ್ಲಿ ಟೊಮೆಟೊವನ್ನು ಅರ್ಧ ದರಕ್ಕೆ ಮಾರಾಟ ಮಾಡಿದ್ದು, ಇದೀಗ ತಲೆಮರೆಸಿಕೊಂಡಿದ್ದಾನೆ.

ಮೆಹಕ್ ಟ್ರಾನ್ಸ್ ಪೋರ್ಟ್ ಮಾಲೀಕ ಸಾದಿಕ್, ಕಳೆದ ರಾತ್ರಿಯೇ ಅಹಮದಾಬಾದ್​ನತ್ತ ಹೊರಟ್ಟಿದ್ದು, ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಟೊಮೆಟೊ ಮಾರಾಟದಿಂದ ಬಂದ ಹಣದೊಂದಿಗೆ ನಾಪತ್ತೆಯಾಗಿರುವ ಚಾಲಕ ಅನ್ವರ್ ವಿರುದ್ಧ ಅಹಮದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ನಿರ್ಧರಿಸಿದ್ದಾರೆ.

ಟೊಮೆಟೊ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಜಮೀನಿನಲ್ಲಿದ್ದ ಬೆಳೆ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಇದರ ನಡುವೆ ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ಮೌಲ್ಯದ ಟೊಮೆಟೊ ಹೊತ್ತು ರಾಜಸ್ಥಾನ ಕಡೆ ಹೊರಟಿದ್ದ ಲಾರಿ ನಾಪತ್ತೆಯಾಗಿತ್ತು.

ಕೋಲಾರ ಎಪಿಎಂಸಿ ಮಾರುಕಟ್ಟೆಯ ಮುನಿರೆಡ್ಡಿ ಎಂಬುವರು ಸುಮಾರು 21 ಲಕ್ಷ ರೂ. ಮೌಲ್ಯದ ಸುಮಾರು 750 ಕ್ರೇಟ್‌ (11 ಟನ್‌) ಟೊಮೆಟೊವನ್ನು ಜು.27ರಂದು ರಾಜಸ್ಥಾನದ ಜೈಪುರಕ್ಕೆ ಮೆಹತ್‌ ಟ್ರಾನ್ಸ್‌ಪೋರ್ಟ್ ಗೆ ಸೇರಿದ ಲಾರಿಯ ಮೂಲಕ ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ಕೋಲಾರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!