• Fri. May 3rd, 2024

ಪಶುಸಂಗೋಪನಾ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ದ ಜಿಪಂ ಮುಂದೆ ಅನಿರ್ದಿಷ್ಟಾವಧಿ ಧರಣಿ: ಚಿಕ್ಕನಾರಾಯಣ,

PLACE YOUR AD HERE AT LOWEST PRICE

ಪಶುಸಂಗೋಪನಾ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ದ ಜಿಪಂ ಮುಂದೆ ಅನಿರ್ದಿಷ್ಟಾವಧಿ ಧರಣಿ ಚಿಕ್ಕನಾರಾಯಣ,

ಕೋಲಾರ: ಜಿಲ್ಲೆಯ ಪಶುಸಂಗೋಪನಾ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ಸೇರಿದಂತೆ ಇತರೆ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಮುಂದಿನ ವಾರ ಜಿಪಂ ಮುಂದೆ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಿಪಬ್ಲಿಕನ್ ಸೇನೆ ಜಿಲ್ಲಾ ಅಧ್ಯಕ್ಷ ಚಿಕ್ಕನಾರಾಯಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಶುಸಂಗೋಪನಾ ಇಲಾಖೆಯ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಭ್ರಷ್ಟಾಚಾರದ ಕೂಪವಾಗಿ ಮಾಡಿಕೊಂಡು ಇದ್ದಾರೆ ಈ ಸಂಬಂಧವಾಗಿ ಈಗಾಗಲೇ ಲೋಕಾಯುಕ್ತ ತನಿಖೆಗೆ ಒತ್ತಾಯಿಸಲಾಗಿದೆ ಸರ್ಕಾರವು ಇಲಾಖೆಗಳ ಮೂಲಕ ಹೆಚ್ಚಿನ ಅನುದಾನವನ್ನು ವಿವಿಧ ಸೌಲಭ್ಯಗಳಿಗಾಗಿ ಮೀಸಲಿಟ್ಟಿದೆ ಆದರೆ ಇಲಾಖೆಯ ಅಧಿಕಾರಿಗಳು ಫಲಾನುಭವಿಗಳಿಗೆ ಯೋಜನೆ ತಲುಪಿಸದೆ ಮನಬಂದಂತೆ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಸರಕಾರಕ್ಕೆ ಸುಳ್ಳು ಮಾಹಿತಿಗಳನ್ನು ಕಳಸಿ ಅನುದಾನವನ್ನು ತಮ್ಮ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಅಧಿಕಾರಿಗಳ ಭ್ರಷ್ಟಾಚಾರವು ದಾಖಲೆಗಳ ಸಮೇತ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ನಮ್ಮ ಆರೋಪಗಳು ಏನಾದರೂ ಸುಳ್ಳು ಇದ್ದರೆ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳಲ್ಲಿ ಪ್ರಾಮಾಣಿಕತೆ ಇದ್ದರೆ ನನ್ನ ವಿರುದ್ದ ಕಾನೂನು ಕ್ರಮ ಕೈಗೊಳ್ಳಿ ಎಂದು ಸವಾಲು ಹಾಕಿದರು.

ಪಶುಸಂಗೋಪನೆ ಇಲಾಖೆಯಲ್ಲಿ ದ್ವಿತೀಯ ದರ್ಜೆ ಗುಮಾಸ್ತ ಸೇವೆಯಲ್ಲಿ ಇದ್ದಾಗ ಮರಣ ಹೊಂದಿದದ ಸಂದರ್ಭದಲ್ಲಿ ಅವರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಮುನಿಚಂದ್ರಪ್ಪ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ ಮಾಡಿದ್ದಾನೆ ಇಲಾಖೆಯಲ್ಲಿ ಹಗರಣಗಳು ನಿರಂತರವಾಗಿದ್ದು ಜಿಲ್ಲೆಯ ಕೆಲವು ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಖಾತೆ ಹಾಗೂ ಇ ಸ್ವತ್ತು ಮಾಡಿಕೊಡುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದಾರೆ ಅವರು ಜನರ ಸೇವೆ ಮಾಡಲು ಬಂದಿಲ್ಲ ಕೋಟ್ಯಾಂತರ ರೂಪಾಯಿ ಸಂಪಾದನೆ ಮಾಡಲು ಬಂದಿದ್ದಾರೆ ಜಿಲ್ಲಾಧಿಕಾರಿ ಕೂಡಲೇ ಇಂತಹ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಿಪಬ್ಲಿಕನ್ ಸೇನೆ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಂಟು ಆಟ್ಸ್ ರಾಮಕೃಷ್ಣ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ವಿ.ಅಮರೇಶ್, ಪ್ರಧಾನ ಕಾರ್ಯದರ್ಶಿ ಶ್ರೀನಾಥ್, ಜಿಲ್ಲಾ ಉಪಾಧ್ಯಕ್ಷ ಎಲ್ಲೇಶ್, ಬಂಗಾರಪೇಟೆ ತಾಲೂಕು ಅಧ್ಯಕ್ಷ ಚಂದ್ರಪ್ಪ, ತಿಮ್ಮಯ್ಯ ಮುಂತಾದವರು ಇದ್ದರು

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!