• Sat. May 18th, 2024

PLACE YOUR AD HERE AT LOWEST PRICE

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಕುರಿತು ಟ್ಚೀಟ್ ಮಾಡಿರುವ ಅವರು, “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೋಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ.

ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ” ಎಂದಿದ್ದಾರೆ.

ದಲಿತರಿಗೆ ದ್ರೋಹ

“ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ದಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ” ಎಂದು ಹೇಳಿದ್ದಾರೆ.

“ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಗೆ 34 ಸಾವಿರ ಕೋಟಿ ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದೆ. ಇದು ಈ ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹ” ಎಂದು ಬೊಮ್ಮಾಯಿ ಟೀಕಿಸಿದ್ದಾರೆ‌.

“ಸಮಾಜ ಕಲ್ಯಾಣ ಸಚಿವ ಡಾ.‌ಎಚ್ ಸಿ ಮಹದೇವಪ್ಪ ಅವರು ಮನಸಿಲ್ಲದೇ ಎಸ್‌ಸಿಎಸ್‌ಪಿ ಟಿಎಸ್‌ಪಿ ಹಣ ವರ್ಗಾವಣೆಗೆ ಒಪ್ಪಿಕೊಂಡಿರುವುದಾಗಿ ಅಸಹಾಯಕತೆ ತೋರಿಸಿರುವುದು ಸರ್ಕಾರದ ನಡೆಯ ಬಗ್ಗೆ ಎಸ್ಸಿ ಎಸ್ಟಿ ಸಮುದಾಯಕ್ಕಿರುವ ಅಸಮಾಧಾನ ತೋರಿಸುತ್ತದೆ. ಇನ್ನೊಂದೆಡೆ ಎಸ್ಸಿ ಎಸ್ಟಿ ಸಮುದಾಯದ ಬಗ್ಗೆ ಕಾಂಗ್ರೆಸ್‌ಗೆ ಇರುವ ನಿರ್ಲಕ್ಷ್ಯ ಧೋರಣೆ ಎತ್ತಿ ತೋರಿಸುತ್ತದೆ” ಎಂದು ಆರೋಪಿಸಿದ್ದಾರೆ.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!