• Sun. May 5th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಗಡಿ ಭಾಗದಲ್ಲಿ ಅನ್ಯ ಭಾಷಿಕರ ಪ್ರಾಬಲ್ಯ ಮತ್ತು ವ್ಯಾಮೋಹ ಹಾಗೂ  ಒತ್ತಾಯಪೂರ್ವಕ ಏರಿಕೆಯಿಂದ ಕನ್ನಡಕ್ಕೆ ಹಿನ್ನಡೆಯಾಗುತ್ತಿದೆ, ಆದರೆ ಗಡಿ ಭಾಗದಲ್ಲಿ ನಿರಂತರವಾಗಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಬೆಳೆಸುವಂತಹ ಅನೇಕ ಕಾರ್ಯಕ್ರಮಗಳು ನಡೆಯುತ್ತಿರುವುದು ಪ್ರಶಂಸನಿಯ ಎಂದು ದೋಣಿಮಡಗು ಗ್ರಾಮ ಪಂಚಾಯಿತಿ ಅಧ್ಯಕ್ಕೆ ಮಂಜುಳಾ ಮಹಾದೇವ್ ಹೇಳಿದರು.

ಅವರು ಕದಿರಿನತ್ತ ಗ್ರಾಮದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಹಾಗೂ ಅಮ್ಮ ಟ್ರಸ್ಟ್ ಸಹಯೋಗದಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ 2023ರ “ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆ ಸರಿಸುಮಾರು 2500 ವರ್ಷಗಳ ಇತಿಹಾಸವನ್ನು ಹೊಂದಿದೆ.

ವಿಶ್ವದಲ್ಲಿ 6800 ಭಾಷೆಗಳಲ್ಲಿ ಕನ್ನಡ ಭಾಷೆ 28ನೇ ಸ್ಥಾನವನ್ನು ಪಡೆದರೆ. ದೇಶದಲ್ಲಿ 2000 ಕಿಂತ ಹೆಚ್ಚು ಭಾಷೆಗಳಲ್ಲಿ 3ನೇ ಸ್ಥಾನವನ್ನು ಕನ್ನಡ ಭಾಷೆ ಅಲಂಕರಿಸಿರುವುದು ಹೆಮ್ಮೆಯ ವಿಚಾರವಾಗಿದ್ದು,  ಕನ್ನಡ ನಾಡು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಮೃದ್ಧ ರಾಜ್ಯಾವಾಗಿದೆ ಎಂದರು.

ಕರುನಾಡು ಗಂಗರು, ಕದಂಬರು, ರಾಷ್ಟ್ರಕೂಟರು, ಹೊಯ್ಸಳರು, ಮೈಸೂರು ರಾಜರು, ಕರ್ನಾಟಕವನ್ನು ಸುಧೀರ್ಘವಾಗಿ ಆಳ್ವಿಕೆ ಮಾಡಿ ಸಾಹಿತ್ಯ ಸಂಸ್ಕೃತಿಯನ್ನು ಶ್ರೀಮಂತ ಗೊಳಿಸಿದ್ದಾರೆ. ಪಂಪ, ರನ್ನ, ಜನ್ನ, ಬಸವ, ಅಕ್ಕಮಹಾದೇವಿ, ಅಲ್ಲಮ ಪ್ರಭು, ರಂತಹ ಅನೇಕ ದಾರ್ಶನಿಕರು ಸಮಾಜ ಸುಧಾರಕರು ಜನ್ಮ ತಾಳಿದ ನೇಲೆವೀಡಾಗಿದೆ ಎಂದರು.

8 ಜ್ಞಾನ  ಪೀಠ ಪ್ರಶಸ್ತಿ ಪಡೆದ ಏಕೈಕ ರಾಜ್ಯ ಕರ್ನಾಟಕವಾಗಿದೆ. ಗಡಿ ಭಾಗವಾದ ಕೋಲಾರ ವಿಭಿನ್ನವಾದ ಜಿಲ್ಲೆಯಾಗಿದೆ.  ಇದು ಅನೇಕ ಹೋರಾಟಗಾರರ ತವರುರಾಗಿದ್ದು ಇಲ್ಲಿನ ವಾಸಿಗಳು  ಐಕ್ಯತೆಯೊಂದಿಗೆ ಕನ್ನಡ ನಾಡು-ನುಡಿ ಭಾಷೆ ನೆಲ ಜಲ ರಕ್ಷಣೆಯ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಮಾತನಾಡಿ ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲಾ ಭಾಷೆಗಳನ್ನು ಗೌರವಿಸಬೇಕು ಆದರೆ ಕನ್ನಡ ಭಾಷೆಯನ್ನು ಆರಾಧಿಸುವಂತಾಗಬೇಕು. ಗಡಿಭಾಗದಲ್ಲಿ ಕನ್ನಡ ನಾಡುನುಡಿ ಸಾಂಸ್ಕೃತಿಕ ಪರಂಪರೆಯನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳು ನಿರಂತರವಾಗಿ ಸಾಗಬೇಕೆಂದರು.

ಕಾರ್ಯಕ್ರಮದಲ್ಲಿ ನಿವೃತ ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ನರಸಿಂಹಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟಲಕ್ಷ್ಮಮ್ಮ. ಮಂಜುಳಾಜಯಣ್ಣ, ಪತ್ರಕರ್ತ ಶ್ರೀರಾಮ್, ಮುಖಂಡರಾದ ಗೋವಿಂದರಾವ್, ತಿಮ್ಮರಾಯಸ್ವಾಮಿ, ರವಳೋಜಿರಾವ್, ಕೆ ಆರ್ ಎಸ್ ಜಿಲ್ಲಾಧ್ಯಕ್ಷ ಚಿಕ್ಕನಾರಾಯಣ ಮೊದಲಾದವರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!