• Sat. Jul 27th, 2024

PLACE YOUR AD HERE AT LOWEST PRICE

ಬಳ್ಳಾರಿಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯತ್ ಗೆ ತೃತೀಯ ಲಿಂಗಿ ಸಿ.ಆಂಜಿನಮ್ಮ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ತೃತೀಯ ಲಿಂಗಿಯೋರ್ವರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು.

ಪಂಚಾಯತ್ ಅಧ್ಯಕ್ಷ ಸ್ಥಾನ ಈ ಭಾರಿ ಪರಿಶಿಷ್ಟ ವರ್ಗಕ್ಕೆ ಮೀಸಲಾಗಿತ್ತು.ಈ ಸ್ಥಾನಕ್ಕೆ ಎರಡು ಬಾರಿ ಸದಸ್ಯರಾದ ಆಂಜಿನಮ್ಮ ಅವರನ್ನು ಕಣಕ್ಕಿಳಿಸಲಾಗಿತ್ತು. ಗ್ರಾಮ ಪಂಚಾಯತ್ ನ 19 ಸದಸ್ಯರು ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಿದ್ದಾರೆ.

ಮೂವರು ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು.ಆಂಜಿನಮ್ಮ ಎರಡು ದಶಕಗಳಿಂದ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹೀಗಾಗಿ ಅವರು ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಸಿ.ಆಂಜಿನಮ್ಮ ಅವರಿಗೆ ಅವಕಾಶ ಕೊಡಲಾಗಿದೆ.

ಈ ಬಗ್ಗೆ ಮಾತನಾಡಿದ ಆಂಜಿನಮ್ಮ, ಚುನಾವಣೆಗೆ ಸ್ಪರ್ಧಿಸಲು ಇಷ್ಟವಿಲ್ಲದಿದ್ದರೂ, ಗ್ರಾಮದ ಹಿರಿಯರ ಮಾತಿಗೆ ಬೆಲೆ ಕೊಟ್ಟು ಚುನಾವಣೆಗೆ ಸ್ಪರ್ಧಿಸಿದೆ. ಅವರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸುತ್ತೇನೆ  ಮತ್ತು ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುವುದಾಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!