• Fri. May 3rd, 2024

PLACE YOUR AD HERE AT LOWEST PRICE

ಎಎಪಿ ಸಂಸದ ಸುಶೀಲ್ ಕುಮಾರ್ ಗುಪ್ತಾ ಅವರು ಬುಧವಾರ ರಾಜ್ಯಸಭೆಗೆ ಟೊಮೆಟೊ ಹಾರವನ್ನು ಧರಿಸಿ ಬಂದಿದ್ದು, ಈ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿದರು.

ಸಂಸದರ ನಡೆಗೆ ಸಭಾಧ್ಯಕ್ಷರಾದ ಜಗದೀಪ್‌ ಧನಕರ್‌ ಅವರು ತೀವ್ರ ಆಕ್ಷೇಪ ವ್ಯಕ್ತಡಿಸಿದರಲ್ಲದೆ, ಇದರಿಂದ ಭಾರಿ ನೋವುಂಟಾಗಿದೆ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಕೆಲವು ಅಧಿಕೃತ ದಾಖಲೆಗಳನ್ನು ಮಂಡಿಸುವಾಗ ಗುಪ್ತಾ ಅವರು ಟೊಮೆಟೊ ಹಾಗೂ ಶುಂಠಿಯ ಹಾರ ಧರಿಸಿ ಸದನಕ್ಕೆ ಪ್ರವೇಶಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಜಗದೀಪ್ ಧನಕರ್, ಸಭೆಯ ಅಧ್ಯಕ್ಷನಾಗಿ ಸುಶೀಲ್ ಗುಪ್ತಾ ಅವರು ಸಭೆಗೆ ಬಂದ ರೀತಿಯಿಂದ ನನಗೆ ಬೇಸರವಾಗಿದೆ. ಈ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಬಹುದು ಎಂದು ನಾನು ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂದು  ಹೇಳಿ ಕಲಾಪವನ್ನು ಮುಂದೂಡಿದ್ದರು.

ಈ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ ಎಎಪಿ, ಮೋದಿಯ ಹಣದುಬ್ಬರ ಬಡ ಜನರ ರಕ್ತ ಹೀರುತ್ತಿದೆ.ಎಎಪಿ ಸಂಸದ  ಟೊಮೆಟೊ ಮತ್ತು ಶುಂಠಿಯ ಹಾರವನ್ನು ಹಾಕಿ ಪಾರ್ಲಿಮೆಂಟ್ ಗೆ ಪ್ರವೇಶಿಸಿರುವುದು ಬೆಲೆಯೇರಿಕೆ ಬಗ್ಗೆ ಗಮನ ಸೆಳೆಯುವ ಉದ್ದೇಶದಿಂದಾಗಿದೆ ಎಂದು ಹೇಳಿದ್ದಾರೆ

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!