• Sat. Apr 27th, 2024

PLACE YOUR AD HERE AT LOWEST PRICE

 ಗೆ 6 ತಿಂಗಳು  ವಿಧಿಸಿದ .

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈ ನ್ಯಾಯಾಲಯವು, ಆರು ತಿಂಗಳು ಜೈಲು ಶಿಕ್ಷೆ ಜತೆಗೆ ₹5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಜಯಪ್ರದಾ ಅವರು ಚೆನ್ನೈನಲ್ಲಿ ರಾಮ್​ ಕುಮಾರ್​ ಮತ್ತು ರಾಜ ಬಾಬು ಜತೆಗೆ ಸೇರಿ ಎರಡು ಚಿತ್ರಮಂದಿರ ನಡೆಸುತ್ತಿದ್ದರು. ಚಿತ್ರಮಂದಿರದಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ, ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಪಾವತಿ ಮಾಡುತ್ತಿರಲಿಲ್ಲ.

ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ಆರೋಪಿಸಿ, ರಾಜ್ಯ ವಿಮಾ ನಿಗಮದ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ಚೆನ್ನೈನ ಎಗ್ಮೋರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.

ಈ ಹಿಂದೆ ಜಯಪ್ರದಾ ಸೇರಿದಂತೆ ಮೂವರು ಮದ್ರಾಸ್ ಹೈಕೋರ್ಟ್‌ನಲ್ಲಿ ಈ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದರು. ಆದರೆ, ಚೆನ್ನೈ ಎಗ್ಮೋರ್ ನ್ಯಾಯಾಲಯವು ಜಯಪ್ರದಾ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಜಯಪ್ರದಾ ಮತ್ತು ಇತರ ಇಬ್ಬರಿಗೆ ತಲಾ ₹5000 ದಂಡ ಹಾಗೂ 6 ತಿಂಗಳು ಜೈಲು ವಿಧಿಸಿದೆ.

ಈ ಹಿಂದೆಯೂ ಕೂಡ ಜಯಪ್ರದಾ ಅವರು ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು ₹20 ಲಕ್ಷ ತೆರಿಗೆ ಹಣವನ್ನು ಪಾವತಿ ಮಾಡಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟ​ರಿನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು. ಜಯಪ್ರದಾ ಅವರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ರಾಜಕೀಯದಲ್ಲಿಯೂ ಸಕ್ರೀಯವಾಗಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!