• Tue. Apr 30th, 2024

PLACE YOUR AD HERE AT LOWEST PRICE

ಉರಿಗಿಲಿ ಗ್ರಾಮ ಪಂಚಾಯ್ತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅನು ಮುನಿರಾಜು ಹಾಗೂ ಉಪಾಧ್ಯಕ್ಷರಾಗಿ ಗೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ.

೧೫ ಸದಸ್ಯರ ಬಲ ಇರುವ ಉರಿಗಿಲಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನು ಮುನಿರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯರಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಮಂಜುನಾಥ್ ತಮ್ಮ ಪ್ರತಿಸ್ಪರ್ಧಿ ಪ್ರವೀಣ್ ವಿರುದ್ಧ ಒಂಬತ್ತು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.

ಚುನಾವಣೆಗಾಗಿ ಗುರುತಿಸಿದ್ದ ನೀರಾವರಿ ಇಲಾಖೆಯ ಅಕ್ರಮ್ ಪಾಷ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎನ್. ರವೀಂದ್ರ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿದರು.

ನೂತನ ಅಧ್ಯಕ್ಷೆ ಅನು ಮುನಿರಾಜು ಮಾತನಾಡಿ, ಗ್ರಾಮ ಪಂಚಾಯ್ತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ, ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉರಿಗಿಲಿ ವೆಂಕಟಸ್ವಾಮಿ, ಹನುಮಪ್ಪ, ಉಪ್ಪುಕುಂಟೆ ಗೋಪಾಲಪ್ಪ, ಸೀನಪ್ಪ, ನಾಗನಾಳ ಡಾ.ಮುನಿರಾಜು, ಸೌಂದರ್ಯ ಮಧು ಮುಂತಾದವರು ಇದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!