• Sun. Apr 28th, 2024

PLACE YOUR AD HERE AT LOWEST PRICE

ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿ.ನಾಗವೇಣಿ ಗಣೇಶ್ ಅಧ್ಯಕ್ಷರಾಗಿಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಜಿ.ಮಂಜುನಾಥ್ ಆಯ್ಕೆ ಆಗಿರುತ್ತಾರೆ.

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಸಾಮಾನ್ಯ ಮೀಸಲಾತಿಯನ್ನು ಸರ್ಕಾರ ನಿಗದಿ ಪಡಿಸಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಒಟ್ಟು 17 ಸದಸ್ಯರನ್ನು ಹೊಂದಿರುವ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗವೇಣಿ ಗಣೇಶ್ 8 ಮತಗಳು ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಯಲ್ಲಮ್ಮ 8 ಮತಗಳು ಪಡೆದು ಸಮಬಲ ಸಾಧಿಸಿದರು ಒಂದು ಮತ ತಿರಸ್ಕೃತಗೊಂಡಿತು. ಇಬ್ಬರೂ ಅಭ್ಯರ್ಥಿಗಳು ಸಮಬಲ ಸಾಧಿಸಿದ ಹಿನ್ನಲೆಯಲ್ಲಿ ಲಾಟರಿ ಮೂಲಕ ಆಯ್ಕೆ ನಡೆಸಿದಾಗ ಅದೃಷ್ಟ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗವೇಣಿ ಗಣೇಶ್ ಪರ ಒಲಿದು ಗೆಲುವು ಪಡೆದು ಆಯ್ಕೆಯಾಗಿದ್ದಾರೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಜಿ.ಮಂಜುನಾಥ್ 9 ಮಾತುಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಹೆಚ್.ಎನ್.ಶ್ರೀನಿವಾಸ್ ವಿರುದ್ಧ ಗೆಲುವು ಪಡೆದು ಆಯ್ಕೆಯಾಗಿದ್ದಾರೆ ಎಂದು ಚುನಾವಣೆಗೆ ಗುರುತುಪಡಿಸಿದ ಅಧಿಕಾರಿ ಸಿಡಿಪಿಒ ವಿನೋದ್ ರಾಜ್ ಘೋಷಿಸಿದರು. ಪಿಡಿಒ ಹರೀಶ್ ಕುಮಾರ್ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ನೂತನ ಅಧ್ಯಕ್ಷರು ಮಾತನಾಡಿ ಪಂಚಾಯತಿಯ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎಲ್ಲಾ ಸದಸ್ಯರ ಸಹಕಾರ ದೊಂದಿಗೆ ಅಭಿವೃದ್ಧಿ ಮಾಡಲಾಗುವುದು ಎಂದರು .

ಈ ಸಂಧರ್ಭದಲ್ಲಿ ಮಾಜಿ ಅಧ್ಯಕ್ಷ ವೆಂಕಟೇಶಪ್ಪ, ರಾಘವೇಂದ್ರ, ಶಿಲ್ಪಾ, ಮಲ್ಲಿಗಮ್ಮ ಬಸವರಾಜ್, ಮಂಜುಳಮ್ಮ, ವೆಂಕಟೇಶ್, ಗಣೇಶ್, ಸಂತೋಷ್,ಬಸವನತ್ತ ಶ್ರೀನಿವಾಸ್, ರೇಣುಕಮ್ಮ, ಉಮಾ, ಸೌಂದರ್ಯ,ಶ್ರೀನಾಥ್,ಮಂಜುಳ, ಜಯಲಕ್ಷ್ಮಿ,ಅರುಣಮ್ಮ ಇದ್ದರು.

ಪಂಚಾಯತಿಯ ಸದಸ್ಯರುಗಳು ಹಾಗೂ ಸಿಬ್ಬಂದಿ ಮತ್ತು ಜಲಗಾರರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!