• Sun. Apr 28th, 2024

PLACE YOUR AD HERE AT LOWEST PRICE

ಹಿಂದುತ್ವ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡರಾತ್ರಿಯೇ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರರಕ್ಷಣಾ ಪಡೆ ಎಂಬ ಸಂಘಟನೆ ಕಟ್ಟಿಕೊಂಡಿರುವ ಪುನೀತ್ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ, ರಾಮನಗರ ಜಿಲ್ಲೆಯ ಸಾತನೂರು ಬಳಿ ಹಸು ವ್ಯಾಪಾರಿ ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಈತ, ಇತ್ತೀಚೆಗೆ, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ.

ಈತನ ವಿರುದ್ಧ 2013ರಿಂದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹಲವು ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್‌ ಪಟ್ಟಿ ತೆರೆಯಲು ಪೊಲೀಸರು ಸಿದ್ಧತೆ ನಡೆಸಿ, ಅದಕ್ಕಾಗಿ ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಿಗೆ ವರದಿ ಸಲ್ಲಿಸಿದ್ದರು.

ವರದಿ ಪರಿಶೀಲಿಸಿದ್ದ ಸಹಾಯಕ ಪೊಲೀಸ್‌ ಆಯುಕ್ತರು ಜೂನ್ 28ರಂದು ಪುನೀತ್ ಕೆರೆಹಳ್ಳಿಗೆ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್‌ನಲ್ಲಿ, “ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ವಿರುದ್ಧ ರೌಡಿಶೀಟರ್ ಪಟ್ಟಿ ಏಕೆ ತೆಗೆಯಬಾರದು ಎಂಬುದಕ್ಕೆ ವಿವರಣೆ ಸಲ್ಲಿಸಬೇಕು. ಇಲ್ಲದಿದ್ದರೆ ರೌಡಿಶೀಟರ್ ಪಟ್ಟಿ ತೆರೆಯುತ್ತೇವೆ” ಎಂದು ಹೇಳಿದ್ದರು.

ಪುನೀತ್ ಕೆರೆಹಳ್ಳಿ ವಿರುದ್ಧ ಬೇಗೂರು ಪೊಲೀಸ್‌ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್‌ ಸಿಟಿ, ಸಾತನೂರು ಪೊಲೀಸ್‌ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ.

ಸಿಸಿಬಿ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಆಗಸ್ಟ್ 11ರ ತಡರಾತ್ರಿಯೇ ಬಂಧಿಸಿದ್ದಾರೆ. ಗೂಂಡಾ ಕಾಯ್ದೆಯಡಿ ಬಂಧನವಾದರೆ ಒಂದು ವರ್ಷ ಜಾಮೀನು ಸಿಗುವುದಿಲ್ಲ. ಜೈಲುವಾಸ ಖಾಯಂ ಆಗಲಿದೆ.

ಈ ಬಗ್ಗೆ ಶುಕ್ರವಾರ ತಡರಾತ್ರಿ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

32 ವರ್ಷದ ಈತ ಬೆಂಗಳೂರಿನ ಜೆಪಿ ನಗರದ ನಿವಾಸಿಯಾಗಿದ್ದು, ಮೂಲತಃ ಹಾಸನದವನು. ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆ ಕಟ್ಟಿಕೊಂಡು, ಆ ಮೂಲಕ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದರು ಎಂದು ಇಲಾಖೆ ತಿಳಿಸಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!