• Sun. Apr 28th, 2024

PLACE YOUR AD HERE AT LOWEST PRICE

ಬಂಗಾರಪೇಟೆ:ರಾಯಣ್ಣನಿಗೆ ಮರಣದಂಡನೆಯಾಗಿ ಗಲ್ಲುಗಂಬಕ್ಕೇರಿದ ದಿನ ಜನವರಿ ೨೬ನೆಯ ದಿನ ೧೮೩೧; ಜನವರಿ ಇಪ್ಪತ್ತಾರು ಹಾಗೂ ಅವರ ಹುಟ್ಟಿದ ದಿನ ಆಗಸ್ಟ್ 15 ಭಾರತೀಯರ ನಿಜವಾದ ಸ್ವಾತಂತ್ರ್ಯ ದಿನವಾಗಿದೆ ಹಾಗೂ ಗಣರಾಜ್ಯವ ದಿನವೂ ಹೌದು, ಪ್ರಜಾಸತ್ತಾತ್ಮಕ ದಿನ, ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಇವೆರಡು ದಿನಗಳು ಜನನ ಮರಣದವುಗಳು ರಾಯಣ್ಣನಿಗೆ ಮಾತ್ರವಲ್ಲ, ಭಾರತೀಯರಿಗೆ ರಾಷ್ಟ್ರೀಯ ಉತ್ಸವದ ದಿನಗಳಾಗಿವೆ ಎಂದು ಕರ್ನಾಟಕ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಮುನಿಯಪ್ಪ ಹೇಳಿದರು.

ಟ್ಟಣದ ಕನಕ ಭವನದಲ್ಲಿ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿರಾಯಣ್ಣರವರ ಜಯಂತೋತ್ಸವ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ,ಕಿತ್ತೂರಿನಿಂದ ಕೆಲವೇ ದೂರದಲ್ಲಿರುವ ಸಂಗೊಳ್ಳಿ ಗ್ರಾಮದಲ್ಲಿ ಭರಮಪ್ಪ ಮತ್ತು ಕೆಂಚವ್ವ ದಂಪತಿಯ ಪುತ್ರನಾಗಿ ರಾಯಣ್ಣ ಜನಿಸುತ್ತಾನೆ. ಇವರದು ಪ್ರಸಿದ್ಧ ಕುಟುಂಬ. ಇವರ ತಾತ ರೋಗಪ್ಪ ವೀರಪ್ಪ ದೇಸಾಯಿ ಯುದ್ಧದಲ್ಲಿ ತೋರಿದಂತಹ ಶೌರ್ಯಕ್ಕಾಗಿ ‘‘ಸಾವಿರ ಒಂಟೆ ಸರದಾರ’’ ಎಂಬ ಬಿರುದು ನೀಡಿ ರಕ್ತಮಾನ್ಯ ಭೂಮಿಯನ್ನು ಬಳುವಳಿಯಾಗಿ ನೀಡಿದನು ಎಂದರು.

ರಾಯಣ್ಣನ ನಿಸ್ವಾರ್ಥ ಹೋರಾಟ, ದೇಶಪ್ರೇಮ ಯುವಜನತೆಯಲ್ಲಿ ಸ್ಫೂರ್ತಿಯನ್ನು ತುಂಬುತ್ತದೆ. ಇದ್ದರೆ ರಾಯಣ್ಣನಂತಹ ದೇಶಪ್ರೇಮಿಗಳಿರಬೇಕು ಎನ್ನುವುದು ಎಲ್ಲರ ಮಾತಾಗಿದೆ. ರಾಯಣ್ಣನ ದಂಡಿನಲ್ಲಿ ಸ್ಮರಿಸಬೇಕಾದ ಅತ್ಯಂತ ಮಹತ್ವದ ವಿಷಯವೆಂದರೆ ಒಗ್ಗಟ್ಟು ಉಂಟು ಮಾಡಿರುವ ಬಗೆಯನ್ನು ತಿಳಿಯುವುದು ಎಂದು ಹೇಳಿದರು.

ಪೊಲೀಸ್ ಇನ್ಸ್ಪೆಕ್ಟರ್ ಸಂಜೀವರಾಯಪ್ಪ ಮಾತನಾಡಿ, ಈ ಒಂದು ಕಾರ್ಯಕ್ರಮ ಸಮುದಾಯದ ಮಕ್ಕಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ಒಳ್ಳೆಯ ವಿಷಯವಾಗಿದೆ, ಸಮುದಾಯದಲ್ಲಿ ಈ ರೀತಿ ಅವರ ಸಾಧನೆಯನ್ನು ಗುರುತಿಸಿ ಮಾಡಿದಾಗ ಅವರ ಮುಂದಿನ ಭವಿಷ್ಯದಲ್ಲೂ ಸಹ ಇನ್ನು ಉನ್ನತ ಮಟ್ಟಕ್ಕೆ ಏರುತ್ತಾರೆ ಎಂದರು.

ಇಲ್ಲಿರುವಂತಹ ಮಕ್ಕಳು ಒಂದೊಂದು ವಿಷಯದಲ್ಲೂ ಒಂದೊಂದು ಸಾಧನೆ ಮಾಡಿದ್ದಾರೆ, ಎನ್ಐಟಿ ನಲ್ಲಿ ರಾಷ್ಟ್ರಮಟ್ಟದಲ್ಲಿ ಮೂರನೇ ರ್ಯಾಂಕ್ ಪಡೆದಿರುವ ನಮ್ಮ ಸಮುದಾಯದ ವಿದ್ಯಾರ್ಥಿ ಇನ್ನು ಉತ್ತಮ ಮಟ್ಟಕ್ಕೆ ಹೋಗಲಿ ರಾಷ್ಟ್ರಮಟ್ಟದಲ್ಲೇ ಮೂರನೇ ಪಡೆಯುವುದು ಸಾಮಾನ್ಯವಲ್ಲ ಅಂತಹದು ನಮ್ಮ ಬಂಗಾರಪೇಟೆ ವಿದ್ಯಾರ್ಥಿಯೆಂದರೆ ಬಹಳ ಹೆಮ್ಮೆಯ ವಿಷಯ ಇಂತಹ ಮಕ್ಕಳನ್ನು ಕರೆಸಿ ಸನ್ಮಾನ ಮಾಡುವುದು ಬಹಳ ವಿಶೇಷ ಇವರು ಇಲ್ಲಿರುವಂತಹ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಆಗಬೇಕು ಎಂದರು.

ಈಗ ಸನ್ಮಾನ ಪಡೆಯುತ್ತಿರುವ ಮಕ್ಕಳು ಇನ್ನು ಉಳಿದಿರುವ ಮಕ್ಕಳಿಗೆ ಸ್ಪೂರ್ತಿಯಾಗಬೇಕು ಅವರನ್ನು ಸಹ ಪ್ರೋತ್ಸಾಹಿಸಿ ಮುಂದೆ ತರಬೇಕು, ಕೆಲ ಪೋಷಕರು ಹೆಣ್ಣು ಮಕ್ಕಳನ್ನು ಕೇವಲ ದ್ವಿತೀಯ ಪಿಯುಸಿ ತನಕ ಓದಿಸಿ ನಂತರ ಮದುವೆ ಮಾಡಿ ಕಳಿಸಿಕೊಡುತ್ತಾರೆ ಅಂತಹ ಘಟನೆಗಳು ನಡೆದಾಗ ಪೋಷಕರಿಗೆ ಸಮುದಾಯದವರು ಳಿಹೇಳಿ ಮಕ್ಕಳನ್ನು ಚೆನ್ನಾಗಿ ಓದಿಸಿ ಉತ್ತಮ ವಿದ್ಯಾಭ್ಯಾಸವನ್ನು ಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ವಸತಿ ಶಾಲೆಯ ಅಧ್ಯಕ್ಷರಾದ ಮುನಿಯಪ್ಪ,ಕರ್ನಾಟಕ ಪ್ರದೇಶ ಕುರುಬರ ಸಂಘ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ   ಅಧ್ಯಕ್ಷರಾದ ಅಪ್ಪಯ್ಯಗೌಡ, ತಾಲ್ಲೂಕು ಕುರುಬ ಸಂಘದ ಅಧ್ಯಕ್ಷ ಎಲ್.ರಾಮಕೃಷ್ಣಪ್ಪ ಇದ್ದರು. ಬೂದಿಕೋಟೆ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್,ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಣ್ಣ, ಖಜಾಂಚಿ ಹರೀಶ್,ಮಾಜಿ ಪುರಸಭೆ ಅಧ್ಯಕ್ಷ ಬಾಗ್ಯಮ್ಮ, ಹಿರಿಯರಾದ ದೊಡ್ಡಣ್ಣ, ಕೆ ಸಿ ರೆಡ್ಡಿ ಕಾಲೇಜಿನ ದೈಹಿಕ ಶಿಕ್ಷಕ ಸತೀಶ್ ಮೊದಲಾದವರಿದ್ದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!