• Sat. Apr 27th, 2024

PLACE YOUR AD HERE AT LOWEST PRICE

ಬೆಂಗಳೂರು:ಮುಂಗಾರು ಮಳೆ ನಿರೀಕ್ಷೆಯಂತೆ ದಾಖಲಾದಾಗ ಆಗ ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರಿನ ಹಂಚಿಕೆ ಸರಾಗವಾಗಿ ನಡೆದುಕೊಂಡು ಬರುತ್ತಿದೆ. ಆದರೆ, ಮಳೆ ಕಡಿಮೆಯಾದಾಗ ಆ ವರ್ಷ ಉಂಟಾಗುವ ಸಂಕಷ್ಟಗಳನ್ನು ಎರಡು ರಾಜ್ಯಗಳು ಪರಸ್ಪರ ಹಂಚಿಕೊಳ್ಳಬೇಕು. ಹೀಗಾದಾಗ ಮಾತ್ರ ನೀರು ಹಂಚಿಕೆಯಲ್ಲಿ ಯಾವ ಸಮಸ್ಯೆಯೂ ಉದ್ಭವಿಸುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಎರಡೂ ರಾಜ್ಯಗಳ ನಡುವೆ ಮತ್ತೆ ವಿವಾದ ತಲೆದೋರಿರುವ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಈ ವರ್ಷ ರಾಜ್ಯದಲ್ಲಿ ನಿರೀಕ್ಷೆಯಷ್ಟು ಮಳೆಯಾಗಿಲ್ಲ. ಹೀಗಾಗಿ ಕಾವೇರಿ ಕೊಳ್ಳದ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಈ ಸಂಬಂಧವಾಗಿ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನೆಲ, ಜಲ, ಭಾಷೆಯ ಪ್ರಶ್ನೆ ಬಂದಾಗ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವೆಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇಲ್ಲಿ ನಾವೆಲ್ಲರೂ ಒಂದು ಎಂದು ತಿಳಿಸಿದರು.

ಈ ಹಿಂದೆ ನಾನೂ ಸಹ ಜಲಸಂಪನ್ಮೂಲ ಸಚಿವನಾಗಿದ್ದೆ. ಸಂಕಷ್ಟದ ವರ್ಷದಲ್ಲಿ ಆಗಿಂದಾಗ್ಗೆ ಸಮಸ್ಯೆ ಉದ್ಭವಿಸಿ, ನ್ಯಾಯಾಲಯದ ಮೆಟ್ಟಿಲಿನಲ್ಲಿ ನಿಲ್ಲಬೇಕಾದ ಪ್ರಮೇಯ ಸೃಷ್ಟಿಯಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ತಮಿಳುನಾಡಿನ ಅಣೆಕಟ್ಟುಗಳಲ್ಲಿರುವ ನೀರಿನ ಸಂಗ್ರಹ, ಅವರ ಅಚ್ಚುಕಟ್ಟು ಪ್ರದೇಶ, ಅವರಿಗೆ ಬೇಕಾದ ನೀರಿನ ಪ್ರಮಾಣ ಎಲ್ಲವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ವಿವರಿಸಿದರು.

ಕಾವೇರಿ ನೀರಿನ ಹಂಚಿಕೆಯ ಅಂತಿಮ ತೀರ್ಪಿನಲ್ಲಿ ನ್ಯಾಯವಾದಿ ಫಾಲಿ ನಾರಿಮನ್‌ ರಾಜ್ಯದ ಪರವಾಗಿ ವಾದಿಸಿದ್ದರು. ಆಗ ನಾನೂ ಸೇರಿದಂತೆ ಅಧಿಕಾರಿಗಳು ಅವರಿಗೆ ರಾಜ್ಯದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದೇವು. ಇದರಿಂದಾಗಿ ಬೆಂಗಳೂರಿಗೆ ಹೆಚ್ಚುವರಿಯಾಗಿ 17 ಟಿಎಂಸಿ ನೀರು ಸಿಕ್ಕಿತು.

ನಾರಿಮನ್ ಕೊಡುಗೆ ಮರೆಯುವಂತಿಲ್ಲ ಈ ವಿಚಾರದಲ್ಲಿ ಬೆಂಗಳೂರಿನ ಉತ್ತರ ಭಾಗವು ಕಾವೇರಿ ಕೊಳ್ಳಕ್ಕೆ ಬರುವುದಿಲ್ಲ ಎನ್ನುವ ತಮಿಳುನಾಡಿನ ವಾದ ಬಿದ್ದು ಹೋಯಿತು. ಅಂತಿಮವಾಗಿ ಈ ತೀರ್ಪಿನಲ್ಲಿ ರಾಜ್ಯಕ್ಕೆ ಲಾಭವಾಗುವಂತೆ ನಾವು ನೋಡಿಕೊಂಡಿದ್ದೇವೆ. ಇದರಲ್ಲಿ ಯಾರು ಏನೇ ಹೇಳಲಿ, ನಾರಿಮನ್ ಅವರ ಕೊಡುಗೆಯನ್ನು ಮರೆಯುವಂತಿಲ್ಲ. ಅವರ ಶ್ರಮದಿಂದಾಗಿ ಇಂದು ಬೆಂಗಳೂರಿನ ಬಹುಭಾಗಕ್ಕೆ ಕಾವೇರಿ ನೀರು ಸಿಗುತ್ತಿದೆ ಎಂದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕೆಲವೊಮ್ಮೆ ರಾಜ್ಯದ ಹಿತಕ್ಕೆ ವ್ಯತಿರಿಕ್ತವಾಗಿ ಸೂಚನೆಗಳನ್ನು ನೀಡಿದೆ. ಮಳೆಯ ಕೊರತೆ ಇದ್ದಾಗ ವಸ್ತುಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅನ್ಯಾಯವಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ತಮಿಳುನಾಡು ನಿಯಮಕ್ಕಿಂತ ಹೆಚ್ಚಿನ ಬೆಳೆ ಬೆಳೆದ ಪರಿಣಾಮ ಅಧಿಕ ನೀರು ಬಳಸಿ ನಿಯಮ ಉಲ್ಲಂಘಿಸಿದೆ. ಈ ಸಂಬಂಧ ನಡೆದ ಸಭೆಯಲ್ಲಿ ಕರ್ನಾಟಕ ಅಧಿಕಾರಿಗಳು ಮಾತನಾಡಿಲ್ಲ ಎಂದು ಬಸವರಾಜ ಬೊಮ್ಮಾಯಿ ಸೇರಿದಂತೆ ಕೆಲವು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರ; ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತೇವೆ. ಆದರೆ ಕಾವೇರಿ ನದಿ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಮೇಕೆದಾಟು ಯೋಜನೆಗೆ ಸಹಕಾರ ನೀಡುವಂತೆ, ಯಾವುದೇ ತಕರಾರರು ಮಾಡದಂತೆ ಅವರು ತಿಳಿಸಿದ್ದಾರೆ. ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರ ರಾಜ್ಯದ ಹಿತ ಕಾಯದೇ ನೆರೆ ರಾಜ್ಯಕ್ಕೆ ನಮ್ಮ ನೀರಿನ ಹಕ್ಕನ್ನು ಬಿಟ್ಟು ಕೊಡುತ್ತಿದೆ ಎಂದು ದೂರಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!