• Sat. Apr 27th, 2024

PLACE YOUR AD HERE AT LOWEST PRICE

ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ. ಇನ್ನೂ ಒಂದಿಷ್ಟು ದಿನ ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್‌ ಮುನಿಯಪ್ಪ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅನ್ನಭಾಗ್ಯ ಯೋಜನೆಯ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿ ಕರೆದು ಮಾತನಾಡಿದರು.

“ಗ್ಯಾರಂಟಿ ಯೋಜನೆಗಳ ಘೋಷಣೆ ಬಳಿಕ ಎಪಿಎಲ್‌ ಮತ್ತು ಬಿಪಿಎಲ್‌ ಕಾರ್ಡ್‌ಗಳಿಗೆ ಬೇಡಿಕೆ ಹೆಚ್ಚಿತ್ತು. ಆದರೆ, ಇಲಾಖೆಯ ನಿರ್ಧಾರ ಹಲವರಿಗೆ ನಿರಾಸೆ ತಂದಿದೆ. ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದೇವೆ. ಡಿಬಿಟಿ ವಿಷಯದಲ್ಲಿ ಕಳೆದ ತಿಂಗಳು ತಡವಾಯಿತು. ಈ ತಿಂಗಳ 25 ಅಥವಾ 26ರೊಳಗೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಹಣ ಸಂದಾಯವಾಗುತ್ತದೆ” ಎಂದರು.

“ಜೋಳ, ರಾಗಿ, ಅಕ್ಕಿ ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡುತ್ತಾರೆ ಎನ್ನುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಇಲಾಖೆಯಲ್ಲಿ ಖಾಲಿಯಿರುವ 2,181 ಹುದ್ದೆ ಭರ್ತಿ ಮಾಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

ಅಕ್ಕಿ ಕೊಡಲು ಒಪ್ಪಿದ ರಾಜ್ಯಗಳು.

“ಅನ್ನಭಾಗ್ಯ ಯೋಜನೆಗೆ ಕೊರತೆಯಾಗಿರುವ ಅಕ್ಕಿ ಪ್ರಮಾಣವನ್ನು ತೆಲಂಗಾಣ ಮತ್ತು ಆಂಧ್ರಪ್ರದೇಶ ಪೂರೈಸಲು ಮುಂದೆ ಬಂದಿವೆ. ಅಕ್ಕಿ ದರದ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ತಿಂಗಳ ಅಂತ್ಯದೊಳಗೆ ಮಾತುಕತೆ ಅಂತಿಮವಾಗಲಿದೆ” ಎಂದರು.

ಪತ್ರ ಬರೆದಿದ್ದು ನಿಜ.

ವಿಧಾನ ಪರಿಷತ್‌ಗೆ ಸುಧಾಮ್‌ ದಾಸ್‌ ನಾಮ ನಿರ್ದೇಶನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಸುಧಾಮ್‌ ದಾಸ್‌ ನಾಮ ನಿರ್ದೇಶನಕ್ಕೆ ವಿರೋಧಿಸಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ನಿಜ. ಸುಧಾಮ್ ದಾಸ್ ಮೂರು ತಿಂಗಳ ಹಿಂದಿನ ತನಕ ಸರ್ಕಾರಿ ಅಧಿಕಾರಿ ಆಗಿದ್ದರು. ಅವರು ಈಗಷ್ಟೇ ಪಕ್ಷಕ್ಕೆ ಬಂದಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಸುಧಾಮ್ ದಾಸ್ ಪಕ್ಷಕ್ಕೆ ಕೆಲಸ ಮಾಡಲಿ” ಎಂದು ಹೇಳಿದರು

“30 ವರ್ಷಗಳ ಕಾಲದಿಂದ ಕೆಲಸ ಮಾಡಿದ ದಲಿತ ನಾಯಕರಿಗೆ ಅವಕಾಶ ನೀಡಬೇಕು ಎಂಬುದಷ್ಟೇ ನಮ್ಮ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಯಲ್ಲಿ ಪತ್ರ ಬರೆದಿರುವುದು ಸತ್ಯ. ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ. ಹೈಕಮಾಂಡ್ ನಾಯಕರ ನಿರ್ಧಾರ ಮುಖ್ಯ” ಎಂದು ಕೆ ಎಚ್‌ ಮುನಿಯಪ್ಪ ಹೇಳಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!