• Sun. Apr 28th, 2024

PLACE YOUR AD HERE AT LOWEST PRICE

ಇಂದಿರಾ ಕ್ಯಾಂಟೀನ್‌ನಲ್ಲಿ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಿದ್ದು, ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ.

ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.

“ಇಂದಿರಾ ಕ್ಯಾಂಟೀನ್​ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆ ಮೂಲಕ ಗ್ರಾಹಕರಿಂದ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ. ರಾಜ್ಯಾದ್ಯಂತ ನೂತನವಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್​​ಗಳಲ್ಲಿ ಈ ಹೊಸ ದರ ಇರಲಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್​ಗಳಲ್ಲಿ ಹಳೇ ದರ ಮುಂದುವರಿಕೆ ಆಗಲಿದೆ” ಎಂದು ತಿಳಿಸಿದರು.

“ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್​ ತೆರೆಯಲು ಒಪ್ಪಿಗೆ ನೀಡಲಾಗಿದೆ. ಹೊಸ ಇಂದಿರಾ ಕ್ಯಾಂಟೀನ್​ಗೆ 27 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ. ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಇರಲಿದೆ” ಎಂದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!