• Sat. Apr 27th, 2024

PLACE YOUR AD HERE AT LOWEST PRICE

ರಾಜ್ಯ ರಾಜಧಾನಿ ಬೆಂಗಳೂರು, ಕೋಲಾರ ಮೊದಲಾದ ಕಡೆ ಶನಿವಾರ ಸಾಯಂಕಾಲ ಜೋರು ಮಳೆ ಸುರಿದಿದೆ. ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಬೆಳಗ್ಗೆಯಿಂದ ಕೆಲವೆಡೆ ಮೋಡ ಕವಿದ ವಾತಾವರಣವಿತ್ತು. ಸಾಯಂಕಾಲದ ವೇಳೆಗೆ ಮಳೆ ಆರಂಭವಾಯಿತು. ಈ ವೇಳೆ, ಕೆಲಸ ಮುಗಿಸಿ ಮನೆಗೆ ತೆರಳುವವರು ಪರದಾಡುವಂತಾಯಿತು. ವಾಹನ ಸಂಚಾರ ದಟ್ಟಣೆ ಉಂಟಾಯಿತು. ವಾಹನ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಅಂಗಡಿ ಮುಗ್ಗಟ್ಟುಗಳ ಆಸರೆ ಪಡೆದರು.

ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 4 ರಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!