• Sat. Apr 27th, 2024

PLACE YOUR AD HERE AT LOWEST PRICE

ಮೈಸೂರು:ರಾಜ್ಯ ಸರಕಾರದ ಐದು ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಚಾಲನೆ ನೀಡಲಾಗುತಿದ್ದು, ರಾಜ್ಯದ 1 ಕೋಟಿ 10 ಲಕ್ಷ ಕುಟುಂಬಗಳ ಯಜಮಾನಿಯರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮೈಸೂರು, ಮಂಡ್ಯ,ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳು, ಸಂಪುಟದ ಸದಸ್ಯರು ಹಾಗೂ ದೆಹಲಿಯಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸುತ್ತಿದ್ದು ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದರು.

ಸುಮಾರು 1.5 ಲಕ್ಷ ಮಹಿಳೆಯರು ಮಹಾರಾಜ ಕಾಲೇಜು ಮೈದಾನದಲ್ಲಿ ಭಾಗಿಯಾಗುವುದರೊಂದಿಗೆ ಐತಿಹಾಸಿಕ ಕಾರ್ಯಕ್ರಮ ಆಗುವುದರೊಂದಿಗೆ ನಮ್ಮದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು. ಈಗಾಗಲೇ ಶೇ.80 ರಷ್ಟು ನೋಂದಣಿ ಪ್ರಕ್ರಿಯೆ ಮುಗಿದಿದ್ದು, ಕೊನೆಯ ದಿನಾಂಕ ನಿಗದಿ ಮಾಡಿರುವುದಿಲ್ಲ ನೋಂದಣಿ ನಿರಂತರವಾಗಿರುತ್ತದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ಮಾತನಾಡಿ, ರಾಜ್ಯದ 130 ಲಕ್ಷ ಕುಟುಂಬಗಳು ಸ್ವಾವಲಂಬಿ ಜೀವನ ನಡೆಸಲು ಇದೊಂದು ಉತ್ತಮ ಯೋಜನೆಯಾಗಿದ್ದು, ಸ್ವಾತಂತ್ರ್ಯಾ ನಂತರದ ಬಹುದೊಡ್ಡ ಯೋಜನೆಯಾಗಿದೆ, ಮಹಿಳಾ ಸಶಸ್ತೀಕರಣದೊಂದಿಗೆ ಮಹಿಳೆಯರ ಆತ್ಮಗೌರವ ಹೆಚ್ಚಿಸುವ ಕಾರ್ಯಕ್ರಮವಾಗಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದು ಅವರಿಗೆ ಸರಿಯಾದ ಊಟ, ಶೌಚಾಲಯ, ಬಸ್ ವ್ಯವಸ್ಥೆ, ಕುಡಿಯುವ ನೀರು ಸಮರ್ಪಕವಾಗಿರಲಿ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪ್ರಕಾಶ್, ನಿರ್ದೇಶಕರಾದ ಅರ್ಚನ,ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!