• Sun. Apr 28th, 2024

PLACE YOUR AD HERE AT LOWEST PRICE

ಕೋಲಾರ, ಆಗಸ್ಟ್ 19 : ಮಣಿಪುರದಲ್ಲಾದ ಅತ್ಯಾಚಾರ ಘಟನೆ ಮತ್ತು ರಾಜ್ಯದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡುತ್ತಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ತಕ್ಕ ಶಿಕ್ಷೆ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಿರೇಕರಪನಹಳ್ಳಿ ರಾಮಪ್ಪ ಎಚ್ಚರಿಕೆ ನೀಡಿದರು.

ಶನಿವಾರ ಬೆಳಗ್ಗೆ ನಗರ ಹೊರವಲಯದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ  ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಮಣಿಪುರ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮತ್ತು ಕರ್ನಾಟಕದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಅಮಾನುಷ ಘಟನೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.
ಮಣಿಪುರದಲ್ಲಿ ಸತತವಾಗಿ ಮೂರು ತಿಂಗಳಿಂದ ದಲಿತ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ. ಇಬ್ಬರು ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ. ಇದರ ಜೊತೆಗೆ ದಿನನಿತ್ಯ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಿದ್ದರು ಅಲ್ಲಿನ ಬಿಜೆಪಿ ಸರ್ಕಾರ ಕೈ ಕಟ್ಟಿ ಕುಂತಿದೆ. ದಲಿತರ ಬಗ್ಗೆ ಹಿತಾಸಕ್ತಿ ಇಲ್ಲ ಎನ್ನುವುದು ಕಟು ಸತ್ಯವಾಗಿ ಕಾಣುತ್ತಿದೆ. ದಲಿತರ ಏಳಿಗೆ ಸಹಿಸದೆ ಇಂತಹ ನೀಚ ಕೆಲಸಗಳನ್ನು ಅಲ್ಲಿನವರು ಮಾಡುತ್ತಿದ್ದಾರೆ. 

ಇನ್ನು ನಮ್ಮ ಕರ್ನಾಟಕ ರಾಜ್ಯದ ಧರ್ಮಸ್ಥಳದಲ್ಲಿ ಸೌಜನ್ಯ ಎಂಬ ಬಾಲಕಿಯ ಮೇಲೆ 13 ವರ್ಷಗಳ ಹಿಂದೆ ಅತ್ಯಾಚಾರವೆಸಗಿ ಹತ್ಯೆ ಮಾಡುತ್ತಾರೆ. ಆದರೆ ಇದುವರೆವಿಗೂ ಅತ್ಯಾಚಾರ ಆರೋಪಿಗಳನ್ನು ಸರ್ಕಾರ ವಿಪಲವಾಗಿದೆ. ಸೌಜನ್ಯ ಸಾವಿಗೆ ನ್ಯಾಯ ಸಿಗುವುದು ಯಾವಾಗ. ಇಂತಹ ಕೃತ್ಯವೆಸಗಿದ ಆರೋಪಿಗಳನ್ನು ಸರ್ಕಾರ ಕೂಡಲೇ ಬಂದಿಸುವ ಕೆಲಸ ಏಕೆ ಮಾಡುತ್ತಿಲ್ಲ. ಇಂತಹವರಿಗೆ ಕಠಿಣ ಶಿಕ್ಷೆ ನೀಡಿದರೆ ರಾಜ್ಯದಲ್ಲಿ ಈ ಬಗೆಯ ಕೆಲಸಗಳು ಕಡಿಮೆಯಾಗುತ್ತವೆ. ಇಲ್ಲದಿದ್ದರೆ ಇನ್ನು ಅನೇಕ ಮಹಿಳೆಯರು ಮಾನ ಪ್ರಾಣ ಕಳೆದುಕೊಳ್ಳುವ ಸಂದರ್ಭ ಬರುತ್ತದೆ. ಹಾಗಾಗಿ ಎರಡು ರಾಜ್ಯದ ಸರ್ಕಾರ ಕೂಡಲೇ ಕ್ರಮ ಜರುಗಿಸಿ ಆರೋಪಿಗಳನ್ನು ಬಂದಿಸಲಿ ಇಲ್ಲದಿದ್ದರೆ ಸಂಘದ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಲಾ ಮಂಡಳಿ ಸಂಚಾಲಕ ವಿ. ಯಲ್ಲಪ್ಪ, ಬೆಂಗಳೂರು ವಿಭಾಗೀಯ ಸಂಚಾಲಕ ಚಿಕ್ಕವಲಗಮಾದಿ ಲಕ್ಷ್ಮಮ್ಮ, ಸಿದ್ದನಹಳ್ಳಿ ಯಲ್ಲಯ್ಯ, ಮಾರುತಿ ಪ್ರಸಾದ್ ,ಕೀಲುಕೊಪ್ಪ ಯಲ್ಲಪ್ಪ, ತಂಬಾರ್ಲಹಳ್ಳಿ ರಾಮಪ್ಪ, ರಾಧಾಕೃಷ್ಣ, ಈನೆಲ ಈ ಜಲ ವೆಂಕಟಾಚಲಪತಿ, ಮೋಹನ್, ಮಾಲಾ, ಬಸಪ್ಪ, ಶ್ರೀಲಕ್ಷ್ಮಿ, ಕೋಲಾರ ಲಕ್ಷ್ಮೀ, ಮಮತ, ಸುಬ್ಬು ಸೇರಿದಂತೆ ಸಂಘದ ಸದಸ್ಯರು, ಕಾರ್ಯಕರ್ತರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!