• Sat. Apr 27th, 2024

PLACE YOUR AD HERE AT LOWEST PRICE

ಇಸ್ರೋ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ವಂಚನೆ ಮಾಡಿದ್ದಕ್ಕಾಗಿ ಹರಿಯಾಣದ ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ.

ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ತಾಂತ್ರಿಕ ಸಿಬ್ಬಂದಿ ನೇಮಕಾತಿಗಾಗಿ ಇಸ್ರೋ ನಡೆಸಿದ ಪರೀಕ್ಷೆಯಲ್ಲಿ ವಂಚನೆ ಮಾಡಿದ ಆರೋಪದ ಮೇಲೆ  ಇಬ್ಬರು ಅಭ್ಯರ್ಥಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು FREE PRESS  JOURNAL ವರದಿ ಮಾಡಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಗಳಿಗೆ ಉತ್ತರಿಸುವಾಗ ಡಿಜಿಟಲ್ ಸಾಧನಗಳನ್ನು ಬಳಸಿಕೊಂಡು ನಕಲು ಮಾಡಿದ್ದಾರೆ ಎಂದು ಅಭ್ಯರ್ಥಿಗಳ ಮೇಲೆ ಆರೋಪಿಸಲಾಗಿದೆ. ಬಂಧಿತ ಇಬ್ಬರು ಅಭ್ಯರ್ಥಿಗಳನ್ನು ಕೂಡ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಿಂದ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಕ್ಕೆ  ಸಂಬಂಧಿಸಿದಂತೆ  ಇತರ ನಾಲ್ವರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಅಕ್ರಮದಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ. ಬಂಧಿತ ಇಬ್ಬರ ವಿರುದ್ಧ ವಂಚನೆ ಪ್ರಕರಣ ದಾಖಲಿಸಲಾಗಿದೆ ಮತ್ತು ಕೋಚಿಂಗ್ ಸೆಂಟರ್‌ಗಳು ಸೇರಿದಂತೆ ಇತರರ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಂಧಿತ ಅಭ್ಯರ್ಥಿಗಳು ಮೊಬೈಲ್ ಫೋನ್ ಕ್ಯಾಮೆರಾಗಳನ್ನು ಬಳಸಿ ಪ್ರಶ್ನೆಗಳ ಫೋಟೋಗಳನ್ನು ತೆಗೆದು ಬೇರೆಡೆಗೆ ಕಳುಹಿಸುತ್ತಿದ್ದರು. ಬಳಿಕ ಅವರು ತಮ್ಮ ಕಿವಿಯಲ್ಲಿರುವ ಬ್ಲೂಟೂತ್ ಸಾಧನಗಳಲ್ಲಿ ಉತ್ತರಗಳನ್ನು ಕೇಳಿಸಿಕೊಂಡು ಬರೆಯುತ್ತಿದ್ದರು. ಈ ಕುರಿತು ಪೊಲೀಸರಿಗೆ ಅನಾಮಧೇಯ ಕರೆ ಬಂದಿತ್ತು. ಅದರ ಆಧಾರದಲ್ಲಿ ಇದೀಗ ಆರೋಪಿ ಅಭ್ಯರ್ಥಿಗಳನ್ನು  ಬಂಧಿಸಲಾಗಿದೆ  ಎಂದು ಪೊಲೀಸರು ಹೇಳಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!