• Mon. May 6th, 2024

PLACE YOUR AD HERE AT LOWEST PRICE

ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸದ್ಯ ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಆಗಸ್ಟ್ 10ರಂದು ಬಿಡುಗಡೆಗೊಂಡ ಜೈಲರ್ ಸಿನಿಮಾ ಸದ್ಯ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ.

ಜೈಲರ್ ಮೊದಲ ಪ್ರದರ್ಶನ ನೋಡಿ ಹೊರಬಂದ ಸಿನಿ ರಸಿಕರು ಚಿತ್ರಕ್ಕೆ ಫುಲ್ ಮಾರ್ಕ್ಸ್ ನೀಡಿದ್ದರು. ಚಿತ್ರದಲ್ಲಿನ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಉದ್ದುದ್ದ ಪೋಸ್ಟ್‌ಗಳನ್ನು ಬರೆದುಕೊಳ್ಳುವುದರ ಮೂಲಕ ಕೊಂಡಾಡಿದ್ದರು.

ಜೈಲರ್ ಸದ್ಯ ತನ್ನ 11 ದಿನಗಳ ಓಟವನ್ನು ಯಶಸ್ವಿಯಾಗಿ ಪೂರೈಸಿ ವಿಶ್ವದಾದ್ಯಂತ ಒಟ್ಟು 500+ ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಜೈಲರ್ ತಮಿಳಿನಾಡಿನಲ್ಲಿ ಮಾತ್ರವಲ್ಲದೇ ಕರ್ನಾಟಕ, ತೆಲುಗು ರಾಜ್ಯಗಳು ಹಾಗೂ ಕೇರಳದಲ್ಲಿಯೂ ಸಹ ಅಬ್ಬರದ ಪ್ರದರ್ಶನವನ್ನು ಕಾಣುತ್ತಿದೆ.

ಇನ್ನು ಕರ್ನಾಟಕದಲ್ಲಿ ಮೊದಲ 10 ದಿನಗಳಲ್ಲಿ 56 ಕೋಟಿ ಗಳಿಕೆ ಮಾಡಿರುವ ಜೈಲರ್ 11ನೇ ದಿನವೂ ಸಹ ಉತ್ತಮ ಕಲೆಕ್ಷನ್ ಮಾಡಿದ್ದು, ಇಂದು ಸಹ ರಾಜ್ಯದಲ್ಲಿ ಜೈಲರ್ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿ ಈ ಮಟ್ಟದ ಕಲೆಕ್ಷನ್ ಮಾಡಿರುವ ಜೈಲರ್ ಕನ್ನಡ ಭಾಷೆಗೂ ಸಹ ಡಬ್ ಆಗಿ ಬಿಡುಗಡೆಗೊಂಡಿದೆ.

ಮೊದಲಿಗೆ ಜೈಲರ್ ಕನ್ನಡ ವರ್ಷನ್ ಗೆ ಹೆಚ್ಚೇನೂ ಪ್ರದರ್ಶನಗಳನ್ನು ನೀಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಜೈಲರ್ ಕನ್ನಡ ವರ್ಷನ್ ವಿತರಕರಿಗೆ ಹಿಡಿ ಶಾಪ ಹಾಕುತ್ತಿದ್ದ ಕನ್ನಡ ಡಬಿಂಗ್ ಪ್ರಿಯರು ಸದ್ಯ ಜೈಲರ್ ಕನ್ನಡ ವರ್ಷನ್ ಪಡೆದುಕೊಳ್ಳುತ್ತಿರುವ ಪ್ರದರ್ಶನಗಳ ಸಂಖ್ಯೆ ಹಾಗೂ ಮಾಡಿರುವ ಗಳಿಕೆ ಕಂಡು ಸಂತಸ ಹೊರಹಾಕಿದ್ದಾರೆ.

ಒಳ್ಳೆಯ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡಿದರೆ ಕನ್ನಡ ಸಿನಿ ರಸಿಕರು ಆ ಚಿತ್ರಗಳ ಕೈ ಬಿಡುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ಸಾಕ್ಷಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿದ್ದಾರೆ‌.

ಅಂದಹಾಗೆ ಜೈಲರ್ ಕನ್ನಡ ವರ್ಷನ್ 11 ದಿನಗಳಲ್ಲಿ ಬರೋಬ್ಬರಿ 3.55 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿ ಕರ್ನಾಟಕ ಬಾಕ್ಸ್ ಆಫೀಸ್‌ನಲ್ಲಿ ಡಬಿಂಗ್ ಚಿತ್ರಗಳ ಪೈಕಿ ನೂತನ ದಾಖಲೆ ಬರೆದಿದೆ‌.

ಹೌದು, 2019ರಲ್ಲಿ ಬಿಡುಗಡೆಯಾಗಿ ಕನ್ನಡಕ್ಕೂ ಡಬ್ ಆಗಿ ಒಟ್ಟಾರೆ 3.50 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದ್ದ ಚಿರಂಜೀವಿ ನಟನೆಯ ಸೈರಾ ನರಸಿಂಹ ರೆಡ್ಡಿ ಚಿತ್ರವನ್ನು ಹಿಂದಿಕ್ಕಿರುವ ಜೈಲರ್ ಇದೀಗ ಕರ್ನಾಟಕದಲ್ಲಿ ಅತಿಹೆಚ್ಚು ಗಳಿಸಿದ ಡಬಿಂಗ್ ಸಿನಿಮಾ ಎನಿಸಿಕೊಂಡಿದೆ.

ಹಾಗಾದರೆ ಜೈಲರ್ ಕನ್ನಡ ವರ್ಷನ್ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ ಯಾವ ದಿನದಂದು ಎಷ್ಟು ಕಲೆಕ್ಷನ್ ಮಾಡಿದೆ ಎಂಬ ವಿವರ ಈ ಕೆಳಕಂಡಂತಿದೆ ದಿನ 1 – 24 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ ದಿನ 2 – 20 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ ದಿನ 3 – 33‌ ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ ದಿನ 4 – 43 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ (ಭಾನುವಾರ) ದಿನ 5 – 29 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ ದಿನ 6 – 52 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ (ರಜಾದಿನ) ದಿನ 7 – 19 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ ದಿನ 8 – 18 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ ದಿನ 9 – 27 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ ದಿನ 10 – 35 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ ದಿನ 11 – 55 ಲಕ್ಷ ರೂಪಾಯಿ ಗ್ರಾಸ್ ಕಲೆಕ್ಷನ್ (ಭಾನುವಾರ).

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!