• Sat. Apr 27th, 2024

PLACE YOUR AD HERE AT LOWEST PRICE

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಕಳೆದ ಜುಲೈ 14 ರಂದು ಉಡಾವಣೆ ಮಾಡಿದ್ದ ಚಂದ್ರಯಾನ-3 ನೌಕೆಯ ‘ವಿಕ್ರಮ್ ಲ್ಯಾಂಡರ್’ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿದೆ.

ಆ ಮೂಲಕ ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.

ಸಂಜೆ 6:03ಕ್ಕೆ ‘ವಿಕ್ರಮ್ ಲ್ಯಾಂಡರ್’ ಅನ್ನು ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಂಟ್ರೋಲ್ ಸೆಂಟರ್‌ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಸೋಮನಾಥ್, ‘ಚಂದಿರನಲ್ಲಿ ಈಗ ಭಾರತವಿದೆ’ ಎಂದು ಘೋಷಿಸಿದರು.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅಲ್ಲಿಂದಲೇ ಈ ಪ್ರಕ್ರಿಯೆಯನ್ನು ವರ್ಚುವಲ್ ಮೂಲಕ ವೀಕ್ಷಿಸಿದರು.

ಬಳಿಕ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ‘ಇದೊಂದು ಐತಿಹಾಸಿಕ ಕ್ಷಣ. ಈಗ ಭಾರತ ಚಂದ್ರನ ಮೇಲಿದೆ. ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಟಿಸಿದ್ದಾರೆ. ಐತಿಹಾಸಿಕ ಕ್ಷಣಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ’ ಎಂದು ಹೇಳಿದರು.

‘ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ’ ಎಂದು ಚಂದ್ರಯಾನ-3 ಪ್ರಾಜೆಕ್ಟ್​ ನಿರ್ದೇಶಕ ವೀರ ಮುತ್ತುವೇಲ್​ ಹೇಳಿದರು.

ಇಸ್ರೋ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ.

ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!