• Sat. Apr 27th, 2024

PLACE YOUR AD HERE AT LOWEST PRICE

ಕೋಲಾರ, ಆ.30 : ಕರ್ನಾಟಕ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೊಸ ಕಲ್ಪನೆಯೊಂದಿಗೆ ಜಾರಿಗೊಳಿಸುತ್ತಿರುವ ಐತಿಹಾಸಿಕ ಯೋಜನೆಗಳು ರಾಷ್ಟ್ರದ ಗಮನ ಸೆಳೆದಿವೆ. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಕೋಲಾರ ತಾಲ್ಲೂಕಿನ ಶಾಸಕ  ಕೊತ್ತೂರು ಜಿ.ಮಂಜುನಾಥ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಸಂಯುಕ್ತವಾಗಿ ಬುಧವಾರ ಕೋಲಾರ ನಗರದ ಹೊರವಲಯದಲ್ಲಿರುವ ಕೊಂಡರಾಜನಹಳ್ಳಿ ಗ್ರಾಮದ ಶಾಂತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
 ರಾಜ್ಯ ಸರ್ಕಾರವು ನುಡಿದಂತೆ ನಡೆದಿದ್ದು, ಚುನಾವಣಾ ಪೂರ್ವದಲ್ಲಿ ಮತದಾರರಿಗೆ ನೀಡದ್ದ ಐದು ಭರವಸೆಗಳ ಪೈಕಿ ನಾಲ್ಕು ಭರವಸೆಗಳನ್ನು ಈಗಾಗಲೇ ಈಡೆರಿಸಿದೆ ಮತ್ತು ಮುಂಬರುವ ದಿನಗಳಲ್ಲಿ ಐದನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಕೋಲಾರ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗಾಗಿ 2,77,567 ಯಜಮಾನಿಯರನ್ನು ಗುರುತಿಸಲಾಗಿದ್ದು, ಈ ಪೈಕಿ ಶೇ. 81.29 ರಷ್ಟು ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡಿರುತ್ತಾರೆ. ಈ ಎಲ್ಲಾ ಅರ್ಹ ಫಲಾನುಭವಿಗಳಿಗೆ ಇಂದಿನಿಂದ ಪ್ರತಿಮಾಹೆ ರೂ. 2000/-ಗಳ ಮೊತ್ತವನ್ನು ಅವರ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಇದಕ್ಕಾಗಿ ಕೋಲಾರ ಜಿಲ್ಲೆಗೆ ಮಾಹೆಯಾನ ರೂ.57 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.
ಇಂದು ರಕ್ಷಾಬಂಧನ ಸುಮುಹೂರ್ತದಲ್ಲಿ ರಾಜ್ಯದ ಮಹಿಳೆಯರ ಪಾಲಿಗೆ ಅಣ್ಣನ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ಹಾಗೂ ಅವರ ಸಹೋದ್ಯೋಗಿ ಸಚಿವರು ಉಡುಗೊರೆ ರೂಪದಲ್ಲಿ ಗೃಹಲಕ್ಷ್ಮೀಗೆ ಹಣವನ್ನು ಬಿಡುಗಡೆ ಮಾಡಿದ್ದಾರೆ. ಪ್ರತಿ ಮಾಹೆ ಜಮೆಯಾಗುವ ಈ ಹಣವನ್ನು ರಾಜ್ಯದ ಸಹೋದರಿಯರು ಹಾಗೂ ತಾಯಂದಿರು ಜೋಪಾನ ಮಾಡಿ ತಮ್ಮ ಆರೋಗ್ಯಕ್ಕಾಗಿ ಹಾಗೂ ಸಂಸಾರದ ಇನ್ನಿತರ ಖರ್ಚು ವೆಚ್ಚಗಳಿಗೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಕಿವಿ ಮಾತು ಹೇಳಿದರು. ಇದೇ ವೇಳೆ ನೂರಾರು ಫಲಾನುಭವಿ ಮಹಿಳೆಯರು ಹಾಗೂ ಸಾರ್ವಜನಿಕರು ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಎಲ್.ಇ.ಡಿ. ಪರದೆ ಮೂಲಕ ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ,,ಅಪರ ಜಿಲ್ಲಾಧಿಕಾರಿ, ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ವಿಜಯನಗರ ಮಂಜುನಾಥ್, ಮಾಜಿ ಅಧ್ಯಕ್ಷ ಖಾದ್ರಿಪುರ ಎಂ. ರಾಜೇಶ್, ಉಪಾಧ್ಯಕ್ಷೆ ನಾರಾಯಣಮ್ಮ, ಮಾಜಿ ಅಧ್ಯಕ್ಷೆ ನಾಗರತ್ನ , ಗ್ರಾಮಪಂಚಾಯ್ತಿ ಸದಸ್ಯರು ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ, ಯೋಜನೆಯ ಫಲಾನುಭವಿಗಳು, ಸಾರ್ವಜನಿಕರು ಮತ್ತು ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!