• Sat. Apr 27th, 2024

PLACE YOUR AD HERE AT LOWEST PRICE

ಕೋಲಾರ, ಸೆಪ್ಟೆಂಬರ್ ೦೨ : ಬ್ರಹ್ಮಶ್ರೀ ನಾರಾಯಣ ಗುರು ಅವರು ಯಾವುದೇ ಒಂದು ಜಾತಿ ಒಂದು ಸಮುದಾಯಕ್ಕೆ ಮಾತ್ರ ಸೀಮಿತರಲ್ಲಅವರು ಎಲ್ಲಾ ಸಮುದಾಯಗಳಿಗೂ ಆದರ್ಶ ಗುರುಗಳು ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ಹೇಳಿದರು.

ಇಂದು ನಗರದ ಶ್ರೀ ಟಿ. ಚನ್ನಯ್ಯ ರಂಗಮoದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ೧೬೯ನೇ ಜಯಂತಿಯನ್ನು ದೀಪ ಬೆಳಗಿಸಿದ ನಂತರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.

ಬ್ರಹ್ಮಶ್ರೀ ನಾರಾಯಣ ಗುರು ಹೇಳಿದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾತನ್ನು ನಾವೆಲ್ಲರೂ ಪಾಲಿಸಬೇಕು ಎಂದು ತಿಳಿಸಿದರು ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ, ಪದ್ಮಭೂಷಣ ಡಾ: ರಾಜಕುಮಾರ್,ಕರ್ನಾಟಕ ರತ್ನ ಪುನೀತ್ ರಾಜಕುಮಾರ್, ಇಂತಹ ಮಹಾನ್ ವ್ಯಕ್ತಿಗಳು ತಮ್ಮ ಸಮುದಾಯದಲ್ಲಿ ಜನಿಸಿರುವುದು ಬಹಳ ಹೆಮ್ಮೆಯ ಸಂಗತಿ ಎಂದು ಅವರ ಭಾವನೆಗಳನ್ನು ವ್ಯಕ್ತಪಡಿಸಿದರು.

ಕೋಲಾರ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಅವರು ಮಾತನಾಡಿ, ಕೇರಳದ ಬಸವಣ್ಣ ಎಂದೇ ಪ್ರಖ್ಯಾತಿ ಪಡೆದ ನಾರಾಯಣ ಗುರುಗಳು ತಮ್ಮ ಜೀವನವನ್ನು ಸಮಾಜಕ್ಕಾಗಿ ಮುಡಿಪಾಗಿಟ್ಟಿದ್ದರು. ತಮ್ಮ ಕಾಲದಲ್ಲಿ ಕೆಳ ಜಾತಿಯವರ ಮೇಲೆ ಆಗುತ್ತಿದ್ದ ದೌರ್ಜನ್ಯ ಹಾಗೂ ಅವರ ಮೇಲೆ ವಿಧಿಸಿದ್ದ ನಿಬಂಧನೆಗಳನ್ನು ಅಹಿಂಸಾತ್ಮಕವಾಗಿ ವಿರೋಧಿಸಿ, ಮಾನವಕುಲ ಒಂದೇ ಎಂಬ ಸಿದ್ಧಾಂತವನ್ನು ಸಮಾಜದಲ್ಲಿ ಎಲ್ಲರಿಗೂ ತಿಳಿಸುವ ಮೂಲಕ ಸಮಾಜದಲ್ಲಿ ಸರ್ವರಿಗೂ ಸಮಾನತೆ ದೊರೆಯಬೇಕು. ನಾರಾಯಣಗುರು ಸಾಮಾಜಿಕ ಸುಧಾರಣೆಯ ಹರಿಕಾರ ಎಂದು ಹೇಳಿದರು,

ಇದೇ ಸಂದರ್ಭದಲ್ಲಿ ದಿವ್ಯ ಚೇತನ ಶ್ರೀ ನಾರಾಯಣ ಗುರು ದೇವ್ ಅವರ ಬಗ್ಗೆ ಡಾ. ಎಂ.ಓ. ಮಮತೇಶ್ ಕಡೂರು ವಿಶೇಷ ಉಪನ್ಯಾಸವನ್ನು ನಡೆಸಿಕೊಟ್ಟರು ಇದೇ ವೇಳೆ ನಾರಾಯಣಗುರುಗಳ ಜೀವನ ಚರಿತ್ರೆಯ ಕುರಿತು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ಕೋಲಾರ ಜಿಲ್ಲಾ ಆರ್ಯ ಈಡಿಗ ಜನಾಂಗದ ಕೌಶಲ್ಯ ಅಭಿವೃದ್ಧಿ ಸಂಘದ ಅಧ್ಯಕ್ಷ ಮಾಸ್ತಿ ರಮೇಶ್ ಮಾತನಾಡಿ, ಸಮಾಜ ಸುಧಾರಕ ನಾರಾಯಣಗುರುಗಳು ಮಾನವ ಸಮಾನತೆ ಹಾಗೂ ಶೋಷಣೆ ವಿರುದ್ಧ ಹೋರಾಟಗಳನ್ನು ನಡೆಸಿ ಮೌನ ಕ್ರಾಂತಿಯ ಮಾರ್ಗ ಅನುಸರಿಸಿ ಸನ್ಮಾರ್ಗದಲ್ಲಿ ನಡೆದವರು. ಅವರಂತೆಯೇ ಸಮಾಜದ ಎಲ್ಲರೂ ಸನ್ಮಾರ್ಗದಲ್ಲಿ ನಡೆಯುವಂತಾಗಲೀ ಎಂದು ಆಶಿಸಿದರು. ಇದೇ ವೇಳೆ ಆರ್ಯ ಈಡಿಗ ಸಮಾಜದ ಸಮುದಾಯ ಭವನಕ್ಕಾಗಿ ನಿವೇಶನ ಮಂಜೂರು ಮಾಡಬೇಕು, ಕೋಲಾರ ಜಿಲ್ಲಾ ಕೇಂದ್ರದಲ್ಲಿ ಯಾವುದಾದರೂ ರಸ್ತೆ ಅಥವಾ ವೃತ್ತಕ್ಕೆ ನಾರಾಯಣಗುರುಗಳ ಹೆಸರು ನಾಮಕರಣ ಮಾಡಬೇಕೆಂಬ ಶಾಸಕ ಕೊತ್ತೂರು ಮಂಜುನಾಥ್ ಅವರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಾಗಡಿಯ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ.ಶ್ರೀ.ಶ್ರೀ.ವಿಕ್ಯಾತನಂದ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕೋಲಾರ ತಹಸಿಲ್ದಾರ್ ಹರ್ಷವರ್ಧನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್.ಗೀತಾ, ಮಾಲೂರು ವಿಜಿ, ಜನಾಧಿಕಾರ ಸಂಘಟನೆಯ ಹೂವರಸನಹಳ್ಳಿ ರಾಜಪ್ಪ, ಸಮುದಾಯದ ಮುಖಂಡರುಗಳು ಮತ್ತಿತರರು ಉಪಸ್ಥಿತರಿದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!