• Sun. Apr 28th, 2024

PLACE YOUR AD HERE AT LOWEST PRICE

ಕೋಲಾರ, ಸೆ.೦೨ : ಆದಿಚುಂಚನಗಿರಿ ಶ್ರೀ ಮಠದಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿಯ ಸಂಕಲ್ಪವನ್ನು ಮಾಡಲಾಗುತ್ತಿದೆ ಎಂದು ಆದಿಚುಂಚನಗಿರಿ ಶ್ರೀ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದ ಸ್ವಾಮೀಜಿ ಹೇಳಿದರು.

ನಗರದ ಬಿಜಿಎಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಚೈತನ್ಯ ಪ್ರಸಾದ ಮಧ್ಯಾಹ್ನ ಊಟದ ವ್ಯವಸ್ಥೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ನೊಂದ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರೀಮಠ ಮುಂದಾಗಿದೆ ಎಂದರು.

ನಗರದ ಬಿ ಜಿ ಎಸ್ ಪಿಯು ಕಾಲೇಜಿನಲ್ಲಿ ಬಿ ಎಸ್ ಸಿ, ಹಾಗೂ ಬಿಕಾಂ ಪದವಿಯ ತರಗತಿಗಳನ್ನು ಪ್ರಾರಂಭಿಸಲು ಚಿಂತಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು. ಅನ್ನವೇ ಪರಬ್ರಹ್ಮ ಹಸಿವಿನಿಂದ ನೊಂದವರಿಗೆ, ಅನ್ನವನ್ನು ನೀಡಿ ಸಾರ್ಥಕತೆಯನ್ನು ಮೆರೆಯಿರಿ, ಬದಲಿಗೆ ತಿರಸ್ಕಾರ ಮಾಡುವ ಮನೋಭಾವವನ್ನು ಬಿಟ್ಟು ಪೂಜಿಸುವ ಮನೋಭಾವವನ್ನು ಬೆಳೆಸಿಕೊಳ್ಳಿ ಎಂದು ನುಡಿದರು.

ಇದೇ ವೇಳೆ ವಿದ್ಯಾರ್ಥಿಗಳಿಗೆ ಚೈತನ್ಯ ಪ್ರಸಾದವನ್ನು ನಿರ್ಮಲಾನಂದ ಸ್ವಾಮೀಜಿ ಹಾಗೂ ಅತಿಥಿಗಳಿಂದ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಕೊತ್ತೂರು ಮಂಜುನಾಥ, ಎಂಎಲ್‌ಸಿ ಇಂಚರ ಗೋವಿಂದರಾಜು, ಅನಿಲ್‌ಕುಮಾರ್, ಕೋಲಾರ ಜಿಲ್ಲಾ ವರಿಷ್ಠಾಧಿಕಾರಿ ಎಂ.ನಾರಾಯಣ, ಐಪಿಎಸ್ ಅಧಿಕಾರಿ ದೇವರಾಜ್, ಹಿರಿಯ ವಕೀಲ ಕೆ.ವಿ.ಶಂಕರಪ್ಪ, ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಆನಂದ್, ನಂದಿನಿ ಪ್ರವೀಣ್, ಗುತ್ತಿಗೆದಾರ ಕೃಷ್ಣಾರೆಡ್ಡಿ, ವಕ್ಕಲೇರಿ ರಾಮು, ಕಾರ್ಯಪ್ಪ ಶಿಕ್ಷಣ ಸಂಸ್ಥೆಗಳ ಎಂ.ಚ0ದ್ರಶೇಖರ್, ಬಿಜಿಎಸ್ ಕಾಲೇಜು ಶಿಕ್ಷಕರು, ಸಿಬ್ಬಂದಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಸೇರಿದಂತೆ ಇತರರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!