• Sat. May 4th, 2024

ಬದಲಾಗುತ್ತಾ ದೇಶದ ಹೆಸರು? ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್ ಆಫ್ ಭಾರತ್’.

PLACE YOUR AD HERE AT LOWEST PRICE

ನವದೆಹಲಿ :ಬಿಜೆಪಿ ಕೇಂದ್ರ ಸರ್ಕಾರವು ದೇಶದ ಹೆಸರನ್ನು `ಇಂಡಿಯಾ’ ಬದಲಿಗೆ `ರಿಪಬ್ಲಿಕ್ ಆಫ್ ಭಾರತ್’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

`ಇಂಡಿಯಾ’ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು ಕರೆಯಬೇಕು ಎಂಬುದಾಗಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.

ಈ ನಡುವೆ ರಿಪಬ್ಲಿಕ್ ಆಫ್ ಭಾರತ್ ಎಂಬ ಪದವನ್ನು ಉಲ್ಲೇಖಿಸಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ. “ರಿಪಬ್ಲಿಕ್ ಆಫ್ ಭಾರತ್ (ಭಾರತ್ ಗಣರಾಜ್ಯ) – ನಮ್ಮ ನಾಗರಿಕತೆಯು ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆ ಎಂದು ಬರೆದುಕೊಂಡಿದ್ದಾರೆ.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!