• Sun. May 5th, 2024

PLACE YOUR AD HERE AT LOWEST PRICE

ಬೆಂಗಳೂರು:ಇತ್ತೀಚೆಗೆ ರಾಜ್ಯದಲ್ಲಿ ಮಾನವ-ವನ್ಯಪ್ರಾಣಿ ಸಂಘರ್ಷ ಹೆಚ್ಚಳವಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವನ್ಯಪ್ರಾಣಿಗಳು ನಾಡಿಗೆ ಬರದಂತೆ ತಡೆಗಟ್ಟಲು ವೈಜ್ಞಾನಿಕ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಮಂಗಳವಾರ ಮಾನವ-ವನ್ಯಪ್ರಾಣಿ ಸಂಘರ್ಷ ಕುರಿತು ಅರಣ್ಯ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಕಳೆದ 15 ದಿನಗಳಲ್ಲಿ 11 ಜನರು ಆನೆ ದಾಳಿಯಿಂದ ಮೃತಪಟ್ಟಿದ್ದು, ನಿನ್ನೆ ನಾಗರಹೊಳೆ ಅರಣ್ಯ ಪ್ರದೇಶದ ಹೆಗ್ಗಡೆದೇವನಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಕೃಷ್ಣ ನಾಯಕ್ ಎಂಬ 10 ವರ್ಷದ ಬಾಲಕನನ್ನು ಹುಲಿ ಎತ್ತೊಯ್ದಿರುವ ಕುರಿತು ಆತಂಕ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಇಂತಹ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದರು. ಭಾರೀ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ ತೆರವುಗೊಳಿಸಲು ಸೂಚಿಸಿದರು. ಹಾಸನದಲ್ಲಿ ಆನೆಗಳ ಅರಿವಳಿಕೆ ತಜ್ಞ ವೆಂಕಟೇಶ್ ಅವರು ಆನೆ ತುಳಿತಕ್ಕೆ ಬಲಿ ಆಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಗಾಯಾಳು ಆನೆಗೆ ಚಿಕಿತ್ಸೆ ನೀಡುವಾಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತೇ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಹಾಸನ ಡಿಎಫ್ಒಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ನಿರ್ದೇಶನ ನೀಡಿದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!