• Sun. Apr 28th, 2024

PLACE YOUR AD HERE AT LOWEST PRICE

ಕನ್ನಡದಿಂದ ಸಿನಿಮಾರಂಗಕ್ಕೆ ಪ್ರವೇಶ ಪಡೆದ ನಟಿ ರಶ್ಮಿಕಾ ಮಂದಣ್ಣ ನ್ಯಾಷನಲ್ ಕ್ರಶ್ ಆಗಿ ಬಾಲಿವುಡ್‌ವರೆಗೂ ತಮ್ಮ ಪ್ರಯಾಣ ಬೆಳೆಸಿದ್ದಾರೆ. ಹಲವು ಭಾಷೆಗಳಲ್ಲಿ ಕೆಲಸ ಮಾಡಿರುವ ಅವರು, ಹಲವು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.


ಪ್ರತಿಭಾವಂತ ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಮತ್ತೊಂದು ಖುಷಿಯ ವಿಷಯ ಹೊರ ಬಂದಿದೆ. ನಟಿ ರಶ್ಮಿಕಾ ಸೆಪ್ಟಿಮಿಯಸ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ‘ಅತ್ಯುತ್ತಮ ಏಷ್ಯನ್ ನಟಿ’ ವಿಭಾಗದಲ್ಲಿ ರಶ್ಮಿಕಾ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ.

ಕಿರಿಕ್ ಪಾರ್ಟಿ ನಟಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದು, ಈಗ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಸೆಪ್ಟಿಮಿಯಸ್ ಪ್ರಶಸ್ತಿಗೆ ನಾಮನಿರ್ದೇಶನವಾಗಿರುವುದು ಅವರ ಫ್ಯಾನ್ಸ್‌ಗೆ ಭಾರೀ ಖುಷಿ ತಂದಿದೆ. ಸೂಪರ್ ಹಿಟ್ ಪ್ಯಾನ್ ಇಂಡಿಯಾ ಪುಷ್ಟಾ ಸಿನಿಮಾದಲ್ಲಿ ಅಲ್ಲು ಅರ್ಜುನ್ ನಾಯಕಿ ಶ್ರೀವಲ್ಲಿಯಾಗಿ ಮತ್ತಷ್ಟು ಜನರನ್ನು ಮೋಡಿ ಮಾಡಿದ್ದಾರೆ.

ಕನ್ನಡ ಮತ್ತು ತೆಲುಗಿನ ಸಿನಿಮಾಗಳು ನಟಿಯ ಹಿಂದಿಗೆ ಡಬ್ ಆಗಿದ್ದವು. ಇದಾದ ನಂತರ ಬಾಲಿವುಡ್‌ನಲ್ಲಿ ಅವರು ನಟಿಸಿದ ಗುಡ್ ಬೈ ಮತ್ತು ಮಿಷನ್ ಮಜ್ನು ಕೂಡ ಮಿಶ್ರ ಪ್ರತಿಕ್ರಿಯೆ ಪಡೆದಿವೆ. ಕಿರಿಕ್ ಪಾರ್ಟಿಯಿಂದ ಆರಂಭವಾದ ಅವರ ಜರ್ನಿ ಈಗ ಬಾಲಿವುಡ್‌ನ ಪ್ರಮುಖ ನಟ ರಣಬೀರ್ ಕಪೂರ್ ಜೊತೆ ನಾಯಕಿಯಾಗುವಂತೆ ಮಾಡಿದೆ. Instagramನಲ್ಲಿ 38.9 ಮಿಲಿಯನ್ ಫಾಲೋವರ್ಸ್ ಹೊಂದಿರುವ ಅವರು,

.

ಹಲವಾರು ಏಷ್ಯನ್ ಬ್ರ್ಯಾಂಡ್‌ಗಳಿಗೆ ರಾಯಭಾರಿಯಾಗಿದ್ದಾರೆ. ಇದಲ್ಲದೇ, ರಶ್ಮಿಕಾ ಮಂದಣ್ಣ ತೆಲುಗು, ತಮಿಳು, ಹಿಂದಿ ಸೇರಿದಂತೆ ಅನೇಕ ಭಾಷೆಗಳ ಚಿತ್ರರಂಗದಲ್ಲಿ ಹೆಚ್ಚು ಬೇಡಿಕೆಯಿರುವ ನಟಿಯರಲ್ಲಿ ಒಬ್ಬರು.

ಸದ್ಯ ರಶ್ಮಿಕಾ ಮಂದಣ್ಣ ರಣಬೀರ್ ಕಪೂರ್‌ ಜೊತೆಗೆ ‘ಅನಿಮಲ್’ ಮತ್ತು ಬಹು ನಿರೀಕ್ಷಿತ “ಪುಷ್ಪಾ 2” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಶ್ಮಿಕಾ ಮಂದಣ್ಣ ಇತ್ತೀಚೆಗೆ ಶೇಖರ್ ಕಮ್ಮುಲ ಅವರ ಮುಂಬರುವ ನಾಗಾರ್ಜುನ ಅಕ್ಕಿನೇನಿ ಮತ್ತು ಧನುಷ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ವರದಿಗಳಿವೆ.

ಬಾಲಿವುಡ್‌ನ ಮಿಷನ್ ಮಜ್ನು ಮತ್ತು ಗುಡ್ ಬೈ ನಂತರ ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಚಿತ್ರ ‘ಅನಿಮಲ್’ಗೆ ಸಹಿ ಹಾಕಿದ್ದಾರೆ. ಅರ್ಜುನ್ ರೆಡ್ಡಿ ಮತ್ತು ಕಬೀರ್ ಸಿಂಗ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರವನ್ನು ಟಿ ಸೀರೀಸ್, ಭದ್ರಕಾಳಿ ಪಿಕ್ಚರ್ಸ್ ಮತ್ತು ಸಿನಿ 1 ಸ್ಟುಡಿಯೋಸ್ ನಿರ್ಮಿಸುತ್ತಿದೆ.

ರಣಬೀರ್ ಕಪೂರ್ ಅಭಿನಯದ ಅನಿಮಲ್ ವರ್ಷಾಂತ್ಯದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆಗೆ ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ಟ್ರಿಪ್ಟಿ ಡಿಮ್ರಿ ಕೂಡ ಚಿತ್ರದಲ್ಲಿದ್ದಾರೆ. ಮೊದಲ ಬಾರಿಗೆ ಸೌತ್ ಬ್ಯೂಟಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!