• Fri. May 3rd, 2024

PLACE YOUR AD HERE AT LOWEST PRICE

ಬಂಗಾರಪೇಟೆ:ಕ್ರೀಡಾಕೂಟದಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ, ಜೀವನದಲ್ಲಿ ಗುರಿ ಮುಟ್ಟಬೇಕಾದರೆ ಆತ್ಮವಿಶ್ವಾಸದಿಂದ ಮಾತ್ರ ಸಾಧ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರಪ್ಪ ಹೇಳಿದರು.

ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪದವಿ ಪೂರ್ವ ಶಿಕ್ಷಣ ಇಲಾಖೆ  ಹಾಗೂ ನವಚೇತನ ಸಂಯುಕ್ತ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜತೆಗೆ ದೈಹಿಕ ಶಿಕ್ಷಣ, ನೈತಿಕ ಶಿಕ್ಷಣದ ಕಡೆಗೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕ್ರೀಡೆಗಳಲ್ಲಿ ಕ್ರೀಡಾಪಟಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಬೇಕು ಹಾಗೂ ಉನ್ನತ ಅಭ್ಯಾಸಕ್ಕೆ ಹೋದಾಗ ಕ್ರೀಡೆಯಲ್ಲಿ ಭಾಗವಹಿಸಿದ್ದರೆ ಶೇ 5% ಮೀಸಲಾತಿ ಸಿಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನವಚೇತನ ಸಮೂಹ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಲ್ ರಾಮಕೃಷ್ಣಪ್ಪ ಮಾತನಾಡಿ, ಕ್ರೀಡಾಕೂಟದಲ್ಲಿ ಸೋಲು ಗೆಲುವು ಅನ್ನುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಕ್ರೀಡಾಕೂಟದಲ್ಲಿ ಗೆಲುವಿನ ಲೆಕ್ಕಾಚಾರದಲ್ಲಿ ಯಾರೂ ಸಹ ಎದೆಗುಂದದೆ ಮುಂಬರುವ ಕ್ರೀಡೆಗಳ ಕಡೆ ಗಮನ ಹರಿಸಿ ನಮ್ಮ ತಾಲೂಕಿಗೆ ಹಾಗೂ ಜಿಲ್ಲೆಗೆ ಉತ್ತಮ ಹೆಸರು ತರಬೇಕು ಎಂದು ಕಿವಿಮಾತು ಹೇಳಿದರು.

ಪಠ್ಯದ ಜೊತೆಗೆ ಕ್ರೀಡೆಗಳಲ್ಲೂ ಹಲವಾರು ಪ್ರತಿಭೆಗಳಿದ್ದು ಅಂತಹ ಪ್ರತಿಭೆ ಹೊರಬರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ನವ ಚೇತನ ವಿದ್ಯಾ ಸಂಸ್ಥೆಯಿಂದ ಕ್ರೀಡಾಕೂಟವೆಂಬ ಉತ್ತಮ ವೇದಿಕೆ ನೀಡಿದೆ ಇದನ್ನು ಸದುಪಯೋಗಪಡಿಸಿಕೊಂಡು ಸಾಧಕರಾಗಿ ರಾಜ್ಯ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ಕಾಂಗ್ರೆಸ್ ಯುವ ಕಾರ್ಯದರ್ಶಿ ಹರೀಶ್,ಬಿ ಆರ್ ಸಿ ಶಶಿಕಲಾ, ದೈಹಿಕ ಶಿಕ್ಷಕರಾದ ಚಂದ್ರಶೇಖರ್, ನವ ಚೇತನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟಸುಬ್ಬಯ್ಯ, ನಾಗರಾಜ್, ಶ್ರೀರಾಮರೆಡ್ಡಿ, ಮೊದಲಾದವರು ಇದ್ದರು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!