• Fri. May 3rd, 2024

PLACE YOUR AD HERE AT LOWEST PRICE

ದ  ವಿರುದ್ಧ ರಾಜ್ಯಾದ್ಯಂತ :ಬಿ.ಎಸ್.ವೈ

ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಅವರು, “ಈ ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22-23 ಸೀಟು ಗೆಲ್ಲಿಸಿಕೊಂಡು ಬರುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸ್ತಿದ್ದಾರೆ 15-20 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು.

ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಲಿದೆ. ಪ್ರತಿಪಕ್ಷ ನಾಯಕರು ಇಲ್ಲ ಎಂದು ನಾವು ನಮ್ಮ ಕೆಲಸ ನಿಲ್ಲಿಸಿಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ. ವಲಸಿಗ ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ ಎಂದರು.

ರೈತರ ಆತ್ಮಹತ್ಯೆ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಶಿವಾನಂದ ಪಾಟೀಲ್​ರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ  ಎಂದರು.

ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೇ ಕಾರಣ ಎಂಬ ಎಂಪಿ ರೇಣುಕಾಚಾರ್ಯ ಹೇಳಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ರೇಣುಕಾಚಾರ್ಯ ಜೊತೆ ಮಾತಾಡಿದ್ದೇನೆ. ನಾನು ಯಾವುದರ ಬಗ್ಗೆಯೂ ಚರ್ಚೆ ಮಾಡಲ್ಲ ಎಂದು ಹೇಳಿದರು.

 

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!