• Mon. May 6th, 2024

PLACE YOUR AD HERE AT LOWEST PRICE

ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಗ್ರಾಮ‌ ಲೆಕ್ಕಿಗರು ಇನ್ಮುಂದೆ ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.‌

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಗ್ರಾಮ ಲೆಕ್ಕಿಗರನ್ನು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವಂತೆ ಅವರಿಗೆ ಗ್ರಾಮ ಪಂಚಾಯ್ತಿಯಲ್ಲೇ ಒಂದು ಕೊಠಡಿ ಇರುವಂತೆ ಕ್ರಮ ಕೈಗೊಳ್ಳಬೇಕು” ಎಂದರು.

  • ಸರ್ವೇಗೆ ಸಂಬಂಧಿಸಿದ ವ್ಯಾಜ್ಯಗಳು ಶೀಘ್ರ ವಿಲೇವಾರಿಗಾಗಿ ಕ್ರಮ ಕೈಗೊಳ್ಳಬೇಕು. ಭೂ ಮಾಪಕರಿಂದ ಸರ್ವೇ ಪ್ರಕರಣಗಳು ಬಾಕಿ ಉಳಿಯಬಾರದು. ರೈತರು ಸರ್ವೇ ವ್ಯಾಜ್ಯಗಳಿಗಾಗಿ ಕಚೇರಿಗೆ ಅಲೆಯುವುದನ್ನು ತಕ್ಷಣದಿಂದ ತಪ್ಪಿಸಬೇಕು.
  • ಕಂದಾಯ ಇಲಾಖೆಯಲ್ಲಿ ಕಡತಗಳು ಆನ್‌ಲೈನ್‌ನಲ್ಲಿ 5-10 ದಿನದೊಳಗೆ ವಿಲೇವಾರಿ ಆಗಬೇಕು. ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್ ಗಳ ಸರ್ವೇ ಮಾಡುವ ಬಗ್ಗೆ ಪಟ್ಟಿ ಮಾಡಿ, ಬಾಕಿ ಇರುವ ಸರ್ವೇ ಕಾರ್ಯವನ್ನು ವಿಲೇವಾರಿ ಮಾಡಬೇಕು. ನಿಗದಿತ ಅವಧಿಯೊಳಗೆ ಜೋಡಿ ಗ್ರಾಮಗಳ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು.
  • ಬೆಂಗಳೂರು ನಗರ ಸುತ್ತಮುತ್ತ green belt ಪ್ರದೇಶದಲ್ಲಿ ಅನಧಿಕೃತ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಹಕಾರ ನೀಡುತ್ತಿರುವ ಪಿಡಿಒ, ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅನಧಿಕೃತ ಬಡಾವಣೆಗಳ ನಿರ್ಮಾಣ ವಿಷ ವರ್ತುಲವಿದ್ದಂತೆ. ಜಿಲ್ಲಾಧಿಕಾರಿಗಳು, ಸಿಇಓಗಳು ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು.
  • ಜಿಲ್ಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಗಮನ ಹರಿಸಬೇಕು. ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಲೇಬಾರದೆಂದು ಅಧಿಕಾರಿಗಳು ತೀರ್ಮಾನಿಸಬೇಕು.
  • ಬೆಂಗಳೂರು ಸುತ್ತಮುತ್ತ ಹಸಿರು ವಲಯದಲ್ಲಿ ಖಾಸಗಿ ವ್ಯಕ್ತಿಗಳು ಬಡಾವಣೆಗಳನ್ನು ಮಾಡಿ, ನಿವೇಶನಗಳನ್ನು ಹಂಚಿಕೆ ಮನೆ ಕಟ್ಟಿಕೊಂಡಿದ್ದಾರೆ. ಇದನ್ನು ಪಿಡಿಓ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳ ಸಹಕಾರ ಇಲ್ಲದ ಮಾಡಲು ಸಾಧ್ಯವಿಲ್ಲ. ಇದು ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು.
  • ಜಿಲ್ಲೆಗಳಲ್ಲಿ ರೆವೆನ್ಯೂ ಬಡಾವಣೆಗಳಿಗೆ ಅವಕಾಶ ನೀಡಬಾರದು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಕ್ರಮ ಬಡಾವಣೆಗಳ ಸಮಸ್ಯೆ ಕುರಿತು ಪ್ರತ್ಯೇಕ ಸಭೆ ನಡೆಸುವ ಅಗತ್ಯವಿದೆ. ಇತರ ಜಿಲ್ಲೆಗಳಲ್ಲಿ ಇದಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಗಿದೆ. ಅಧಿಕಾರಿಗಳು ಗಂಭೀರ ಸ್ವರೂಪದ ತಪ್ಪುಗಳನ್ನೆಸಗಿದಾಗ ಕ್ರಿಮಿನಲ್‌ ಪ್ರಕರಣಗಳನ್ನೇ ದಾಖಲಿಸಲು ಸೂಚಿಸಲಾಯಿತು.
  • ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಿದ್ದಾಗ, ಪೋಡಿಮುಕ್ತ ಗ್ರಾಮ ಅಭಿಯಾನ ನಡೆಸಿದ್ದರು. ಅದರ ಸ್ಥಿತಿಗತಿ ಏನು? 30,715 ಗ್ರಾಮಗಳಿವೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ 16,850 ಗ್ರಾಮಗಳು ಪೋಡಿ ಮುಕ್ತ ಗ್ರಾಮಗಳಾಗಿವೆ. ಉಳಿದೆಡೆ ಕ್ರಮ ಆಗಬೇಕಿದೆ. 14,000 ಗ್ರಾಮಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈ ಅಭಿಯಾನವನ್ನು ಮತ್ತೆ ಕೈಗೆತ್ತಿಕೊಳ್ಳಬೇಕು.
  • 3,292 ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ರೂಪಿಸುವ ನಿಟ್ಟಿನಲ್ಲಿ 812 ಗ್ರಾಮಗಳಿಗೆ ಅಧಿಸೂಚನೆ ಹೊರಡಿಸಲು ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಈ ಪ್ರಕ್ರಿಯೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ಸೂಚಿಸಿದರು. ಸರ್ವೇ mismatch ಗಳನ್ನು ಭೂ ಮಾಪಕರು, ಎಸಿ, ತಹಸೀಲ್ದಾರ್ ಗಳ ಸರ್ವೇ ಮಾಡುವ ಬಗ್ಗೆ ಪಟ್ಟಿ ಮಾಡಿ, ಬಾಕಿ ಇರುವ ಸರ್ವೇ ಕಾರ್ಯವನ್ನು ವಿಲೀವಾರಿ ಮಾಡಬೇಕು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!