• Mon. Apr 29th, 2024

PLACE YOUR AD HERE AT LOWEST PRICE

ವಂಚನೆ ಪ್ರಕರಣದ ಆರೋಪಿ, ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ್ದಕ್ಕೆ ನೋಟಿಸ್ ಕಳುಹಿಸಲಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಮಾಧ್ಯಮ ವಕ್ತಾರೆ ಸುರಯ್ಯಾ ಅಂಜುಮ್, ”ನನಗೆ ಯಾವುದೇ ನೋಟಿಸ್ ಬಂದಿಲ್ಲ. ಎಲ್ಲವೂ ಸುಳ್ಳು ಸುದ್ದಿ” ಎಂದು ತಿಳಿಸಿದ್ದಾರೆ.

ಘಟನೆಯ ಸಂಬಂಧ ದಿನ.ಕಾಮ್ ಸುರಯ್ಯಾ ಅಂಜುಮ್ ಅವರನ್ನು ಕರೆ ಮಾಡಿ ಮಾತನಾಡಿಸಿದಾಗ, ”ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿರುವ ಆರೋಪದಲ್ಲಿ ಚೈತ್ರಾ ಕುಂದಾಪುರಗೆ ನಾನು ಆಶ್ರಯ ನೀಡಿದ್ದೇನೆ. ಹಾಗಾಗಿ ನೋಟಿಸ್ ಬಂದಿದೆ ಎಂಬುದು ಸುಳ್ಳು. ಆಕೆಯನ್ನು ನಿನ್ನೆ ರಾತ್ರಿ ಉಡುಪಿಯ ಕೃಷ್ಣಮಠದ ರಾಜಾಂಗಣದ ಬಳಿ ಪೊಲೀಸರು ಬಂಧಿಸಿದ್ದಾರೆ. ಒಂದು ವೇಳೆ ನನ್ನ ಬಳಿಯಲ್ಲಿದ್ದಾಗ ಬಂಧಿಸಿದ್ದಿದ್ದರೆ ಪೊಲೀಸರು ನನ್ನನ್ನು ಕೂಡ ಬಂಧಿಸಬೇಕಿತ್ತಲ್ಲವೇ?” ಎಂದು ಕೇಳಿದರು.

“ನನ್ನ ಬಗ್ಗೆ ದ್ವೇಷ ಇರುವವರು ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಿಯಬಿಡುತ್ತಿದ್ದಾರೆ. ಒಂದು ವೇಳೆ ಸಿಸಿಬಿ ಪೊಲೀಸರು ಏನಾದರೂ ನೋಟಿಸ್ ಕಳುಹಿಸಿದರೆ ನಾನು ಉತ್ತರಿಸುವೆ. ನಾನು ಆಶ್ರಯ ನೀಡಿದ್ದೇನೆ ಎಂಬುದು ಸುಳ್ಳು. ಸರಿಯಾದ ಮಾಹಿತಿ ಇಲ್ಲದೆ ನನ್ನ ತೇಜೋವಧೆ ಮಾಡಲಾಗುತ್ತಿದೆ. ಈ ಬಗ್ಗೆ ಮಾನನಸ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಹಾಗೂ ಕಾಂಗ್ರೆಸ್‌ನ ಸುರಯ್ಯಾ ಅಂಜುಮ್, ಉಡುಪಿಯ ಖಾಸಗಿ ಮಾಧ್ಯಮವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಸಹೋದ್ಯೋಗಿಗಳಾಗಿದ್ದರು ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಹಿಂದುತ್ವದ ಕುರಿತು ಉಗ್ರ ಭಾಷಣದ ಮೂಲಕ ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದ್ದ ಚೈತ್ರಾ ಕುಂದಾಪುರ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದಾರೆ.

ಕಳೆದ ಏಳು ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ನಿನ್ನೆ ಉಡುಪಿಯಲ್ಲಿ ಬಂಧಿಸಿದ್ದರು.

ಕಾಂಗ್ರೆಸ್ ಮಾಧ್ಯಮ ವಕ್ತಾರೆ ಸುರಯ್ಯಾ ಅಂಜುಮ್ ಮನೆಯಲ್ಲಿ ಅವಿತು ಕುಳಿತಿದ್ದಳು. ಹಾಗಾಗಿ, ಅಂಜುಂಗೆ ಸಿಸಿಬಿ ಪೊಲೀಸರು ನೋಟಿಸ್ ಕಳುಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು ಎಂದು ವರದಿಯಾಗಿತ್ತು.

Related Post

ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್
ಏಪ್ರಿಲ್ ೨೬ ರೊಳಗೆ ಎಕ್ಸಿಡಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ ಇಲ್ಲವಾದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕಾರ್ಮಿಕರ ಸಂಘಗಳ ಸಭೆಯಲ್ಲಿ ನಿರ್ಧಾರ

Leave a Reply

Your email address will not be published. Required fields are marked *

You missed

error: Content is protected !!