• Sat. May 4th, 2024

ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ:ಕೇಂದ್ರ ಸಚಿವರಿಗೆ ಮನವರಿಕೆ ಪತ್ರ ಬರೆದ ಸಿಎಂ.

PLACE YOUR AD HERE AT LOWEST PRICE

ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣಾ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಮುಖ್ಯಮಂತ್ರಿಗಳು, “ಕಾವೇರಿ ನೀರು ನಿಯಂತ್ರಣಾ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್. ಹಾಗೂ ಕಬಿನಿಯಿಂದ 5000 ಕ್ಯೂಸೆಕ್‌ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣಾ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸಬೇಕು. ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕೇಂದ್ರ ಸರ್ಕಾರ ಕಾಪಾಡಬೇಕು” ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

“ಕರ್ನಾಟಕ ರಾಜ್ಯವು ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯದಿಂದ ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ” ಎಂದು ಮುಖ್ಯಮಂತ್ರಿಗಳು ವಿವರಿಸಿದ್ದಾರೆ.

“ಸೆಪ್ಟೆಂಬರ್ 12 ಹಾಗೂ 24ರವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.

ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹದಲ್ಲಿ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Related Post

ಸರ್ಕಾರದಿಂದ ಪರೀಕ್ಷೆ ವೇಳೆಯಲ್ಲಿ ಹಿಂದೂ ಮಹಿಳೆಯರ ಮಾಂಗಲ್ಯ-ಕಾಲುಂಗುರ ತೆಗೆಸುವ ದುಸ್ಸಾಹಸ: ಡಾ.ವೇಣುಗೋಪಾಲ್ ಆಕ್ರೋಶ
ಮೀಸಲಾತಿ ದುರುಪಯೋಗ ಸಾಭೀತಾದ ಹಿನ್ನಲೆ ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಆಗ್ರಹ
ಐತಿಹಾಸಿಕ ೨೦೦ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ ಪಂಚರಾಜ್ಯಗಳ ಸಾಂಸ್ಕೃತಿಕ ಸಂಗಮಕ್ಕೆ  ಆದಿಮ ಸಜ್ಜು.

Leave a Reply

Your email address will not be published. Required fields are marked *

You missed

error: Content is protected !!